ನಿಷ್ಠೆ, ಪ್ರಾಮಾಣಿಕ ವ್ಯವಹಾರದೊಂದಿಗೆ ಸ್ಪಂದನೆ

society
ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ವ ಸದಸ್ಯರ ಸಮಾನ್ಯ ಸಭೆಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.
Published on

ವಿಜಯವಾಣಿ ಸುದ್ದಿಜಾಲ ಬೆಳ್ವೆ

ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಸಾಮಾನ್ಯ ಸಭೆ ಗುರುವಾರ ನಡೆಯಿತು. ಸಂಘ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ ಅಧ್ಯಕ್ಷತೆ ವಹಿಸಿ, ಸಹಕಾರದ ಮೂಲತತ್ವದಡಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಸಂಘ ವಿವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಜನರಿಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದೆ. ಗ್ರಾಹಕರು ನಿಷ್ಠೆ ಪ್ರಾಮಾಣಿಕ ವ್ಯವಹಾರದೊಂದಿಗೆ ಸಂಘದ ಏಳಿಗೆಯಲ್ಲಿ ಕೈಜೋಡಿಸುತ್ತಿರುವುದು ಉತ್ತಮ ಬೆಳವಣಿಗೆಗೆ ಸಹಕಾರಿ ಎಂದರು.

ಸಾರ್ವಜನಿಕ ಸೇವೆಯಲ್ಲಿ ಸುದೀರ್ಘ ಕಾಲ ಗುರುತಿಸಿಕೊಂಡಿರುವ ಸಂಘ ವರದಿ ವಷರ್ದ ಅಂತ್ಯಕ್ಕೆ 2.06 ಕೋಟಿ ರೂ. ಲಾಭಗಳಿಸಿದ್ದು, ಸದಸ್ಯರಿಗೆ ಶೇ.15.50 ಡಿವಿಡೆಂಡ್ ನೀಡಲಾಗುವುದು ಎಂದರು.

ಸಂಘದ ಉಪಾಧ್ಯಕ್ಷ ಬಿ.ಹರೀಶ್ ಕಿಣಿ ಬೆಳ್ವೆ, ನಿರ್ದೇಶಕರಾದ ಎಚ್.ಕೆ.ಸೀತಾರಾಮ ಶೆಟ್ಟಿ, ಇಚ್ಚಿತಾರ್ಥ ಶೆಟ್ಟಿ, ಎಂ.ಚಂದ್ರಶೇಖರ್ ಶೆಟ್ಟಿ, ಆರ್.ದಯಾನಂದ ಶೆಟ್ಟಿ, ಕೆ.ದಯಾನಂದ ಪೂಜಾರಿ, ಉದಯ ಶೆಟ್ಟಿ, ಗಣಪತಿ ನಾಯ್ಕ, ಗುಲಾಬಿ, ಲಲಿತಾ ಆರ್.ಶೆಟ್ಟಿ, ನರಸಿಂಹ ನಾಯ್ಕ, ವಲಯ ಮೇಲ್ವಿಚಾರಕ ಚಂದ್ರಶೇಖರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಬಿ.ಹರೀಶ್ ಕಿಣಿ ಬೆಳ್ವೆ ಸ್ವಾಗತಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಕೀರ್ತಿಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಗುಮಾಸ್ತ ಶಿವಾನಂದ ವರದಿ ವಾಚಿಸಿದರು. ನಿರ್ದೇಶಕ ಗಣಪತಿ ನಾಯ್ಕ ವಂದಿಸಿದರು.

ಸಂಘದ ವ್ಯಾಪ್ತಿಯ 28 ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಪರಿಕರಗಳ ವಿತರಣೆ, ಪ್ರತಿಭಾ ಪುರಸ್ಕಾರ, ಸಿಇಟಿಯಲ್ಲಿ ಉತ್ತೀರ್ಣರಾಗಿ ಇಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾಭ್ಯಾಸ ಮಾಡುತ್ತಿರುವ ಸದಸ್ಯರ 27 ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.. ಸಂಘದ ವ್ಯಾಪ್ತಿಯ ಕಿರಿಯ, ಹಿರಿಯ, ಪ್ರೌಢ ಮತ್ತು ಕಾಲೇಜು ವಿಭಾಗಗಳ ಅಂತಿಮ ತರಗತಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಶ್ರೇಣಿಯಲ್ಲಿ ಪಲಿತಾಂಶ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಿದರು.

ಗೌರವಾರ್ಪಣೆ

ಸಹಕಾರ ಸಂಘಗಳ ಸಹಾಯಕ ನಿವೃತ್ತ ನಿಬಂಧಕ ಅರುಣ್‌ಕುಮಾರ್ ಎಸ್.ವಿ. ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂಘದ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ರಾಜ್ಯ ಶ್ರೇಷ್ಠ ವೈದ್ಯ ಪ್ರಶಸ್ತಿ ಪುರಸ್ಕೃತ ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜೇಶ್ವರಿ ಎ.ಜಿ., ಪಶು ವೈದ್ಯಕೀಯ ಕ್ಷೇತ್ರದ ರಾಜೀವ ಶೆಟ್ಟಿ ತೊಂಬತ್ತು, ನಾಟಿ ವೈದ್ಯ ವೀರಣ್ಣ ನಾಯ್ಕ ಮಡಾಮಕ್ಕಿ, ಯೋಗಪಟು ರಿಷಾ ಆರ್.ಶೆಟ್ಟಿ ಶಾಂದ್ರಬೆಟ್ಟು ಅರಸಮ್ಮಕಾನು, ಹೈನುಗಾರಿಕೆ ಕ್ಷೇತ್ರದ ಜ್ಯೋತಿ ಅವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net