ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಬೆಂಕಿ

11 an r 1
Published on

ಆಯನೂರು: ಮುದ್ದಿನಕೊಪ್ಪದ ಬಳಿ ಭಾನುವಾರ ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು ಕಾರು ಸಂಪೂರ್ಣ ಸುಟ್ಟು ಹೋಗಿದೆ. ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ. ಭದ್ರಾವತಿ ತಾಲೂಕು ಸಿದ್ದಾಪುರ ಗ್ರಾಮದ ಕಿರಣಕುಮಾರ್ ಎಂಬುವವರು ಡಸ್ಟರ್ ಕಾರಿನಲ್ಲಿ ಹೋಗುತ್ತಿದ್ದು ಆ ಸಮಯದಲ್ಲಿ ಕಾರಿನ ಇಂಜಿನ್ ಭಾಗದಲ್ಲಿ ಹೊಗೆ ಕಾಣಿಸಿದೆ. ತಕ್ಷಣವೇ ಎಚ್ಚೆತ್ತುಕೊಂಡ ಕಿರಣ ಕಾರನ್ನು ರಸ್ತೆಯ ಪಕ್ಕಕ್ಕೆ ಹಾಕಿ ಬ್ಯಾನೆಟ್ ತೆರೆಯಲು ಹೋಗಿದ್ದಾರೆ. ಬ್ಯಾನೆಟ್ ತೆರೆಯುತ್ತಲೆ ಇಂಜಿನ್ ಭಾಗದಲ್ಲಿ ಬೆಂಕಿ ಹೊತ್ತಿರುವುದು ಕಂಡಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಬರುವಷ್ಟರಲ್ಲಿ ಕಾರು ಬೆಂಕಿಗಾಹುತಿಯಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net