ಗ್ರಾಮೀಣ ಪರಿಸರದಲ್ಲಿ ನಿರಂತರ ಆರೋಗ್ಯ ಸೇವೆ : ಶ್ರೀ ವಿದ್ಯಾಪ್ರಸನ್ನ ತೀರ್ಥರು ಆಶೀರ್ವಚನ

1
Published on

ಬೆಳ್ತಂಗಡಿ: ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ ಪರಿಶ್ರಮದಿಂದ ಸಕಲ ಸೌಲಭ್ಯ ಒಳಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತಿಸಿರುವುದು ನಿರಂತರ ಸೇವೆಯ ದ್ಯೋತಕವಾಗಿದೆ ಎಂದು ಕುಕ್ಕೆ ಸುಬ್ರಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀಥರು ಹೇಳಿದರು.

ಉಜಿರೆಯ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿ, ಪರಿಸರದ ಜನರಿಗೆ ಉತ್ತಮ ಆರೋಗ್ಯ ನೀಡಲು ಶ್ರೀ ಸುಬ್ರಹ್ಮಣ್ಯನ ಅನುಗ್ರಹ ಸದಾ ಇರಲಿ ಎಂದರು.

ಶ್ರೀಗಳಿಗೆ ಪೂರ್ಣ ಕುಂಭ ಸ್ವಾಗತ ನೀಡಿ ಸ್ವಾಗತಿಸಿದ ಡಾ.ಗೋಪಾಲಕೃಷ್ಣ ಮತ್ತು ಭಾರತಿ ದಂಪತಿ ಬಳಿಕ ಪಾದಪೂಜೆ ನೆರವೇರಿಸಿದರು.

ಸೀತಾರಾಮ್ ಭಟ್, ಡಾ.ಆದಿತ್ಯರಾವ್, ಡಾ.ಅಂಕಿತಾ ಜಿ.ಭಟ್, ಡಾ.ರೋಹಿತ್ ಜಿ.ಭಟ್ ಮತ್ತು ಕುಟುಂಬಸ್ಥರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net