ಕುದ್ಮಾರು ಶಾಲೆಗೆ ಬೆಂಚ್, ಡೆಸ್ಕ್ ಹಸ್ತಾಂತರ

Kdb_Kudmaru
Published on

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಡಬ ತಾಲೂಕು ಕುದ್ಮಾರು ಸ.ಉ.ಹಿ. ಪ್ರಾಥಮಿಕ ಶಾಲೆಗೆ ಮಂಜೂರಾದ 10 ಸೆಟ್ ಬೆಂಚ್-ಡೆಸ್ಕ್ ಹಸ್ತಾಂತರ ಇತ್ತೀಚೆಗೆ ನಡೆಯಿತು.

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಕುದ್ಮಾರು ಒಕ್ಕೂಟದ ಅಧ್ಯಕ್ಷೆ ಲಲಿತಾ ಈಶ್ವರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕ ಕುಶಾಲಪ್ಪ ಬಿ. ಉದ್ಘಾಟಿಸಿದರು. ಕಡಬ ತಾಲೂಕಿನ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಶ್ರೀಲತಾ, ಆಲಂಕಾರು ವಲಯದ ಮೇಲ್ವಿಚಾರಕಿ ಸುಜಾತಾ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯ ಯೋಗೀಶ ಬರೆಪ್ಪಾಡಿ ಉಪಸ್ಥಿತರಿದ್ದರು. ಅಲಂಕಾರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಪ್ರೇಮಾ ನಿರೂಪಿಸಿ ಸ್ವಾಗತಿಸಿದರು. ಶಿಕ್ಷಕಿ ವೀಣಾ ಕೆ. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net