ಪಂಚಗ್ಯಾರಂಟಿಗಳಿಂದ ಜನತೆಗೆ ಅನುಕೂಲ

blg 22-1 jt
ಬೀಳಗಿಯಲ್ಲಿ ತಾಲೂಕುಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ನೂತನ ಕಚೇರಿ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಜೆ.ಟಿ. ಪಾಟೀಲ ಮಾತನಾಡಿದರು. ಜಿಲ್ಲಾಧ್ಯಕ್ಷ ಡಾ. ಸಾಗರ ತೆಕ್ಕೆನ್ನವರ, ತಾಲೂಕು ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ ಇತರರಿದ್ದರು.
Published on

ಬೀಳಗಿ: ಸರ್ಕಾರದ ಪಂಚಗ್ಯಾರಂಟಿ ಯೋಜನೆಯಿಂದ ಎಲ್ಲ ಸಮುದಾಯದ ಜನರ ಆರ್ಥಿಕತೆಗೆ ಅನುಕೂಲವಾಗಿದೆ ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು.

ಸ್ಥಳೀಯ ತಹಸೀಲ್ದಾರ್ ಕಚೇರಿ ಆಡಳಿತ ಭವನದಲ್ಲಿ ಮಂಗಳವಾರ ತಾಲೂಕುಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಸಮಿತಿ ನೂತನ ಕಚೇರಿ ಪೂಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಯೋಜನೆಗಳು ನೈಜ ಲಾನುಭವಿಗಳಿಗೆ ದೊರೆಯಬೇಕಾಗಿದೆ. ಈ ನಿಟ್ಟಿನಲ್ಲಿ ಅಧ್ಯಕ್ಷರನ್ನು ಹಿಡಿದು ಎಲ್ಲ ಸದಸ್ಯರು ತಮಗೆ ನೀಡಿದ ಜವಾದಾರಿಯನ್ನು ಪ್ರಾಮಾಣಿಕತೆಯಿಂದ ನಿಭಾಯಿಸಬೇಕು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಇರುವರೆಗೂ ಪಂಚ ಗ್ಯಾರಂಟಿಗಳು ನಿಲ್ಲಲ್ಲ. ಬೀಳಗಿ ತಾಲೂಕಿನಲ್ಲಿ ಗೃಹಜ್ಯೋತಿಯಲ್ಲಿ 34,356 ಕುಟುಂಬದವರು ಪ್ರತಿ ತಿಂಗಳು 2 ನೂರು ಯೂನಿಟ್‌ವರೆಗೆ ಉಚಿತ ವಿದ್ಯುತ್, ಯುವ ನಿಧಿಯಲ್ಲಿ 659 ಡಿಗ್ರಿ ಪದವೀಧರರು ಹಾಗೂ ಡಿಪ್ಲೊಮಾ 6 ಜನ ಪದವೀಧರರು, ಶಕ್ತಿ ಯೋಜನೆಯಲ್ಲಿ ಬೀಳಗಿ ಡಿಪೋ ಬಸ್ಸಿನಲ್ಲಿ ಒಂದು ವರ್ಷದಲ್ಲಿ 1.8 ಕೋಟಿ ಮಹಿಳೆಯರು, ಅನ್ನಭಾಗ್ಯ ಯೋಜನೆಯಲ್ಲಿ ಬಡವರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ, ಗೃಹ ಲಕ್ಷ್ಮೀಯಡಿ 2 ಸಾವಿರಗಳಂತೆ 34,157 ಲಾನುಭವಿಗಳು ಇದರ ಲಾಭ ಪಡೆದುಕೊಂಡಿದ್ದಾರೆ ಎಂದರಲ್ಲದೆ, ಗ್ರಾಮಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿಗಳು ಅತಿ ಮುಖ್ಯವಾಗಿವೆ ಎಂದರು.

ಗ್ಯಾರಂಟಿ ಯೋಜನೆ ಸಮಿತಿ ಜಿಲ್ಲಾಧ್ಯಕ್ಷ ಡಾ. ಸಾಗರ ತೆಕ್ಕೆನ್ನವರ ಮಾತನಾಡಿ, ಜನರಿಗೆ ಹೆಚ್ಚಿನ ಚೈತನ್ಯ ನೀಡಲು ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ ಜನಸಾಮಾನ್ಯರ ಕಲ್ಯಾಣಕ್ಕಾಗಿ ಮಹತ್ವದ ಯೋಜನೆಗಳನ್ನು ತಂದು ಅವರ ಬಾಳಿಗೆ ಬೆಳಕು ಚೆಲ್ಲಿದ್ದಾರೆ. ಅವರಿಗೆ ಬೆಂಬಲವಾಗಿ ನಿಲ್ಲುವುದು ಮಾನವ ಧರ್ಮವಾಗಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆ ತಾಲೂಕು ಸಮಿತಿ ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ, ಅನಗವಾಡಿ ಪಿಕೆಪಿಎಸ್ ಅಧ್ಯಕ್ಷ ಮಲ್ಲಯ್ಯ ಕಂಬಿ, ಎಸ್.ಟಿ. ಪಾಟೀಲ, ಜಿಪಂ ಮಾಜಿ ಅಧ್ಯಕ್ಷ ಎಂ.ಎಲ್. ಕೆಂಪಲಿಂಗನ್ನವರ, ತಹಸೀಲ್ದಾರ್ ವಿನೋದ ಹತ್ತಳ್ಳಿ, ತಾಪಂ ಅಭಯಕುಮಾರ ಹತ್ತಳ್ಳಿ, ಪಪಂ ಮುಖ್ಯಾಧಿಕಾರಿ ದೇವೇಂದ್ರ ಧನಪಾಲ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಣಮಂತ ಕಾಖಂಡಕಿ, ಮುಳುಗಡೆ ಹೋರಾಟ ಸಮಿತಿ ಅಧ್ಯಕ್ಷ ಅದೃಶಪ್ಪ ದೇಸಾಯಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net