

ಬೆಂಗಳೂರು: ಕ್ಯಾಬ್ ಚಾಲಕನೊಬ್ಬ (Cab driver) ಉದ್ದೇಶಪೂರ್ವಕವಾಗಿ ತನ್ನ ಕಾರನ್ನು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ನೆಲಕ್ಕೆ ಉರುಳಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂ ಸೇತುವೆ ಬಳಿ ನಡೆದಿದ್ದು, ಇದೀಗ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಇಬ್ಬರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೈಕ್ ಆಕಸ್ಮಿಕವಾಗಿ ಕಾರ್ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಕೋಪದ ಬರದಲ್ಲಿ ಕ್ಯಾಬ್ ಚಾಲಕ ಉದ್ದೇಶಪೂರ್ವಕವಾಗಿ ತನ್ನ ಕಾರನ್ನು ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಇಬ್ಬರು ಬೈಕ್ ಸವಾರರು ನೆಲಕ್ಕುರುಳಿದ್ದಾರೆ.
ಈ ಘಟನೆ ನಡೆದ ಬಳಿಕ ಕ್ಯಾಬ್ ಚಾಲಕನು ತನ್ನ ಕಾರಿನಿಂದ ಇಳಿದು ಬೈಕ್ ಸವಾರರ ಕೀಯನ್ನು ಕಸಿದುಕೊಂಡಿದ್ದಾನೆ. ಈ ವೇಳೆ ಚಾಲಕನು ಕೀಯನ್ನು ಪಡೆಯಲು ಪ್ರಯತ್ನಿಸುತ್ತಿದ್ದರೂ ಆತ ನೀಡದೇ ಸತಾಯಿಸುತ್ತಿದ್ದಾನೆ. ಚಾಲಕನ ಸಹಚರ ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸುತ್ತಿರುವುದನ್ನು ಡ್ಯಾಶ್ ಕ್ಯಾಮ್ ವಿಡಿಯೋದಲ್ಲಿ ಸೆರೆಹಿಡಿಯಲಾಗಿದೆ.
ಈ ಘಟನೆ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಸತ್ಯಾಸತ್ಯತೆಗಳನ್ನು ಪರಿಶೀಲಿಸಲಾಗುತ್ತಿದ್ದು, ಈ ಬಗ್ಗೆ ತನಿಖೆ ಆರಂಭಿಸಿದ್ದೇವೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಾರದ ಆರಂಭದಲ್ಲಿ, ಆಹಾರ ವಿತರಣಾ ಸಿಬ್ಬಂದಿಯೊಬ್ಬ ತನ್ನ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 2ಕಿ.ಮೀ ತನಕ ಆತನನ್ನು ಹಿಂಭಾಲಿಸಿದ ದಂಪತಿ ಆತನ ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ. ಈ ಸಂಬಂಧ ವಿತರಣಾ ಏಜೆಂಟ್ ನೆಲಕ್ಕುರುಳಿ ಮೃತಪಟ್ಟಿದ್ದನು. ಈ ಘಟನೆ ನಡೆದ ಬಳಿಕ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರು. (ಏಜೆನ್ಸೀಸ್)