

ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯಕ್ಕೆ ‘ಬೆಂಗಳೂರು ಸಿಟಿ ವಿಶ್ವವಿದ್ಯಾಲಯ’ ಎಂದು ನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಮಾಧುಸ್ವಾಮಿ ಈ ವಿಷಯ ತಿಳಿಸಿದರು.
ಕೇಂದ್ರೀಯ ವಿಶ್ವವಿದ್ಯಾಲಯ ರಾಜ್ಯದಲ್ಲಿ ರುವುದರಿಂದ ಗೊಂದಲ ಬೇಡ ಎಂಬ ಕಾರಣಕ್ಕೆ ಬೆಂ. ಕೇಂದ್ರ ವಿವಿಗೆ ‘ಬೆಂಗಳೂರು ಸಿಟಿ ವಿವಿ’ ಎಂದು ನಾಮಕರಣ ಮಾಡಲು ತೀರ್ವನಿಸಲಾಗಿದೆ ಎಂದು ಹೇಳಿದರು. ಬೆಂಗಳೂರಿನ ಮಹಾರಾಣಿ ಮತ್ತು ಮಂಡ್ಯ ಕ್ಲಸ್ಟರ್ ವಿವಿಗಳಿಗೆ ವಿಶೇಷಾಧಿಕಾರಿ ನೇಮಕ ಮಾಡಲು ನಿರ್ಧರಿಸಲಾಗಿದೆ. ಸರ್ಕಾರಿ ವಿಜ್ಞಾನ ಕಾಲೇಜಿಗೆ ಸ್ವಾಯತ್ತ ವಿವಿ ಸ್ವರೂಪ ಕೊಟ್ಟು ‘ನೃಪತುಂಗ ವಿಶ್ವವಿದ್ಯಾಲಯ’ ಎಂದು ನಾಮಕರಣ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
20 ಕೋಟಿ ರೂಪಾಯಿ ಮಂಜೂರು: ರಾಜಧಾನಿಯಲ್ಲಿ 86.75 ಕೋಟಿ ರೂ. ವೆಚ್ಚದಲ್ಲಿ ನಿರ್ವಿುಸಲು ಉದ್ದೇಶಿಸಿರುವ ವಿಜ್ಞಾನ ಗ್ಯಾಲರಿಗೆ ಸರ್ಕಾರದಿಂದ 20 ಕೋಟಿ ರೂ. ಮಂಜೂರು ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.