

ಚಿಕ್ಕಮಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆ. ೧೨ರಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಬೆಂಗಳೂರು ಚಲೋ ಚಳವಳಿ ಹಮ್ಮಿಕೊಂಡಿz್ದೆÃವೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ತಿಳಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳು ಮತ್ತು ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ವೃಂದ ಮತ್ತು ನೇಮಕಾತಿ ನಿಯಮಗಳು ೨೦೧೬ಕ್ಕಿಂತ ಮೊದಲು ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಆದೇಶ ಹೊರಡಿಸಿ ೧ ರಿಂದ ೭ ಹಾಗೂ ೧ ರಿಂದ ೮ನೇ ತರಗತಿಗೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ ೧-೫ ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಅರ್ಹ ವಿದ್ಯಾರ್ಹತೆ ಪೂರೈಸಿದ ೨೦೧೪ ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲ ೧ ರಿಂದ ೮ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಮೊದಲಿನಂತೆ ಅರ್ಹತೆ ಆಧಾರದ ಮೇಲೆ ಪ್ರೌಢ ಶಾಲೆಗೆ ಭರ್ತಿ ಮಾಡಬೇಕು. ಪದವಿ ಮತ್ತು ಶಿಕ್ಷಣ ತರಬೇತಿ ಹೊಂದಿದ ೨೦೧೬ಕ್ಕಿಂತ ಪೂರ್ವದಲ್ಲಿ ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸೇವಾ ಜೇಷ್ಠತೆ ರಕ್ಷಣೆಯೊಂದಿಗೆ ಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.
೨೦೧೭ರಲ್ಲಿ ರೂಪಿತಗೊಂಡಿರುವ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು ೨೦೧೬ಕ್ಕಿಂತ ಮೊದಲು ನೇಮಕಾತಿ ಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ೨೦೧೬ಕ್ಕಿಂತ ಮೊದಲು ನೇಮಕಾತಿಯಾದ ಸರ್ವರಿಗೂ ಹಿಂದಿನ ಪದ್ಧತಿಯಂತೆ ಪ್ರೌಢಶಾಲೆಗಳಿಗೆ ವಿದ್ಯಾರ್ಹತೆಯ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿಕ್ಕಮಗಳೂರು ತಾಲೂಕು ಘಟಕದ ಪದಾಧಿಕಾರಿಗಳಾದ ಅಜ್ಜಯ್ಯ, ಮೋಹನಾಕ್ಷಿ, ಶಶಿಧರ್, ಗುರುಮೂರ್ತಿ, ರವಿಕುಮಾರ್, ವಿಮ್ಲಾ ಹಾಗೂ ರೂಪ ಉಪಸ್ಥಿತರಿದ್ದರು.