

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಿಟ್ ಆ್ಯಂಡ್ ರನ್ಗೆ ಯುವಕರಿಬ್ಬರು ಬಲಿಯಾಗಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿರುವ ಅಪಘಾತದ ದೃಶ್ಯ ನೋಡಿದ್ರೆ ಎಂಥವರ ಎದೆಯು ಒಂದು ಕ್ಷಣ ಝಲ್ ಎನ್ನುವಂತಿದೆ.
ಗೌತಮ್ ಮತ್ತು ಶ್ರೀಕಾಂತ ಮೃತ ಯುವಕರು. ಇವರು ಮಂಜುನಾಥ್ ನಗರದ ನಿವಾಸಿಗಳು. ಸ್ವಿಗ್ಗಿ ಡೆಲಿವರಿ ಬಾಯ್ಗಳಾಗಿ ಕೆಲಸ ಮಾಡುತ್ತಿದ್ದರು. ನಗರದ ಜಾಲಹಳ್ಳಿ ವಿಲೇಜ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ನಿನ್ನೆ (ಮಂಗಳವಾರ) ತಡರಾತ್ರಿ ಜಾಲಹಳ್ಳಿ ವಿಲೇಜ್ ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ಊಟ ಡೆಲಿವರಿ ಕೊಡಲು ಹೋಗಿದ್ದರು.
ಡೆಲಿವರಿ ಕೊಟ್ಟು ವಾಪಸ್ ಬೈಕ್ ಮೇಲೆ ಬಂದು ಕುಳಿತಿದ್ದರು. ಬಳಿಕ ಅಲ್ಲಿಂದ ಹೊರಟ ಕೆಲವೇ ಸೆಕೆಂಡ್ಗಳಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಕಾರು ನೋಡು ನೋಡುತ್ತಿದ್ದಂತೆ ಬೈಕ್ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮೇಲಕ್ಕೆ ಹಾರಿ ಬಿದ್ದ ಯುವಕರಿಬ್ಬರ ಪ್ರಾಣವು ಸಹ ಹಾರಿ ಹೋಗಿದೆ.
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೋಡುಗರ ಎದೆ ಝಲ್ ಎನಿಸುವಂತಿದೆ. ಘಟನೆ ಸಂಬಂಧ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್) ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ