ವಿಶ್ವ ವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ಫಿಕ್ಸ್

karaga new
Published on

ಬೆಂಗಳೂರು: ವಿಶ್ವ ವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 23 ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ.

ಏಪ್ರಿಲ್ 15 ರಿಂದ 23 ರವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದ್ದು, ಈ ಬಾರಿಯೂ ಕರಗದ ಪೂಜಾರಿ ಎ. ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಎ.ಜ್ಞಾನೇಂದ್ರ ಹದಿಮೂರನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.

ನಿನ್ನೆ ನಡೆದ ಸಭೆಯಲ್ಲಿ ಎ. ಜ್ಞಾನೇಂದ್ರ ಸ್ವಾಮಿ ಅವರನ್ನು ಮುಜರಾಯಿ ಇಲಾಖೆ ಮತ್ತು ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಆಯ್ಕೆ ಮಾಡಿದೆ.

ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕಿಡಿಗೇಡಿಗಳು ಎ. ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿ ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು. ಆದರೂ ಕರಗದ ಪೂಜಾರಿ ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿ ಉತ್ಸವ ಮುಗಿಸಿ ಧರ್ಮರಾಯ ಸ್ವಾಮಿ ದೇವಾಲಯ ತಲುಪಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net