

ಬೆಂಗಳೂರು : ಎಚ್.ಡಿ.ಕುಮಾರಸ್ವಾಮಿ ಅವರು ಆಕಸ್ಮಿಕವಾಗಿ ಮುಖ್ಯಮಂತ್ರಿಯಾದವರು. ಅವರಿಗೆ ಲಾಟರಿಯಲ್ಲಿ ಅದೃಷ್ಟ ಬಂದಾಗ ಸಿಎಂ ಆಗುತ್ತಾರೆ ಎಂದು ಸಚಿವ ಬಿ.ಸಿ.ಪಾಟೀಲ್ ವಾಗ್ದಾಳಿ ನಡೆಸಿದರು.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಸಂಪುಟ ವಿಸ್ತರಣೆ ನಂತರ ಬಿಜೆಪಿಯ 105 ಮಂದಿ ಶಾಸಕರು ಸುಮ್ಮನೆ ಇರುತ್ತಾರಾ ಎಂದು ನೀಡಿದ ಹೇಳಿಕೆಗೆ ಸಚಿವ ಬಿ.ಸಿ.ಪಾಟೀಲ್ ಪ್ರತಿಕ್ರಿಯೆ ನೀಡಿದರು.
ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕರ ಬಗ್ಗೆ ಮಾತ್ರ ಗಮನ ಹರಿಸಲಿ ಬಿಜೆಪಿ ಶಾಸಕರ ಬಗ್ಗೆ ಅವರಿಗೆ ಚಿಂತೆ ಏಕೆ. ಅವರಿಗೆ ಬಿಜೆಪಿಗೆ ಬರುವ ಆಸೆ ಇದ್ದರೇ ಅದಕ್ಕೆ ನಾವೇ ವೇದಿಕೆ ಸಿದ್ಧಪಡಿಸುತ್ತೇವೆ. 37 ಮಂದಿ ಶಾಸಕರನ್ನು ಇಟ್ಟುಕೊಂಡು ಅವರು ಆಕಸ್ಮಿಕವಾಗಿ ಸಿಎಂ ಆದವರು. ಅಂತವರು ಇನ್ನೊಬ್ಬರ ಬಗ್ಗೆ ಹಗುರವಾಗಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. (ದಿಗ್ವಿಜಯ ನ್ಯೂಸ್)