

ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ನಾಮಕರಣ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರದ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ಯೇಕ ಪತ್ರ ಬರೆದಿರುವ ಎಸ್.ಎಂ.ಕೃಷ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಮ್ಮ ಅವಧಿಯಲ್ಲಿ ಮಾಡಿರುವ ಜನೋಪಯೋಗಿ ಕೆಸಲಗಳನ್ನು ನೆನಪಿಸಿದ್ದಾರೆ.
ಕೆಆರ್ಎಸ್ ಜಲಾಶಯ ನಿರ್ಮಾಣದಿಂದ ಹಿಡಿದು, ಹಲವು ಯೋಜನೆಗಳು ನಾಲ್ವಡಿ ಅವರ ಕನಸಿನ ಕೂಸಾಗಿವೆ. ಆ ಕಾರಣಕ್ಕಾಗಿಯೇ ಈ ಭಾಗದ ಜನರ ಮನಸ್ಸಿನಲ್ಲಿ ಅವರ ಹೆಸರು ಬೆರೆತು ಹೋಗಿದೆ. ನಾಡಿನ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿರುವ ಅವರ ಹೆಸರನ್ನು ಚಿರಸ್ಥಾಯಿಯಾಗಿ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ. ಅವರ ಹೆಸರನ್ನು ಪುನರ್ ನಿರ್ಮಿತವಾಗಿರುವ ರಾಷ್ಟ್ರೀಯ ಹೆದ್ದಾರಿಗೆ ನಾಮಕಾರಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ.