

ಬೆಂಗಳೂರು: ಕೃಷ್ಣರಾಜಪುರದಿಂದ ಬೈಯಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಟ್ಟ ವಿಸ್ತರಿತ ಮಾರ್ಗದ ಮೆಟ್ರೋ ನಿಲ್ದಾಣಗಳ ನಡುವೆ ಸುರತಾ ಪರೀಕ್ಷೆಗಳನ್ನು ಪೂರ್ಣಗೊಳಿಸಲು ಆ.27 (ಭಾನುವಾರ)ರಂದು ನೇರಳ ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಮೈಸೂರು ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣ, ಬೈಯಪ್ಪನಹಳ್ಳಿ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ, ವೈಟ್ಫೀಲ್ಡ್ (ಕಾಡುಗೋಡಿ) ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವೆ ಮ.1 ಗಂಟೆ ವರೆಗೆ ಮೆಟ್ರೋ ರೈಲು ಸೇವೆಗಳು ಇರುವುದಿಲ್ಲ. ಆದರೆ ಬೆ. 7 ಗಂಟೆಯಿಂದ ಮ.1ರ ವರೆಗೆ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆಗಳು ಲಭ್ಯವಿರಲಿದೆ.
ಬೈಯಪ್ಪನಹಳ್ಳಿಯಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗೆ ಮತ್ತು ಕೃಷ್ಣರಾಜಪುರದಿಂದ ವೈಟ್ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣದವರೆಗೆ ಮ.1 ಗಂಟೆಯ ನಂತರ ರಾ.11ರ ವರೆಗೆ ಎಂದಿನಂತೆ ಮೆಟ್ರೋ ರೈಲು ಸಂಚಾರ ಇರಲಿದೆ. ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಎಂಆರ್ಸಿಎಲ್ ಸ್ಪಷ್ಟಪಡಿಸಿದೆ.