ವರುಣಾರ್ಭಟಕ್ಕೆ ಸಿಲಿಕಾನ್ ಸಿಟಿ ತತ್ತರ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Rain
Published on

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ ರಜೆ ಘೋಷಿಸಿದ್ದಾರೆ.

ಇಂದು ಬೆಂಗಳೂರಿನ ಮೆಜೆಸ್ಟಿಕ್‌, ರೇಸ್‌ಕೋರ್ಸ್‌, ರಾಜಾಜಿನಗರ, ಮಲ್ಲೇಶ್ವರಂ ಸೇರಿದಂತೆ ವಿವಿಧೆಡೆ ಮಳೆಯಿಂದಾಗಿ ರಸ್ತೆಗಳು ಜಲಾವೃತ್ತಗೊಂಡಿವೆ. ಜನರು ರಸ್ತೆಯಲ್ಲಿ ನಡೆದಾಡುವುದಕ್ಕೂ ಕಷ್ಟಪಡುವಂತಾಗಿದೆ.

ವಾಹನ ಸಂಚಾರಕ್ಕೂ ತೊಂದರೆಯಾಗಿದ್ದು, ಸವಾರರು ಜೀವಭಯದಲ್ಲಿ ತೆರಳಬೇಕಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಹಾಗೂ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net