ಸರ್ಕಾರಿ ಅಧಿಕಾರಿ ಪ್ರತಿಮಾ ಕೊಲೆ ಕೇಸ್‌: ಓರ್ವ ಪೊಲೀಸ್ ವಶಕ್ಕೆ

crime
Published on

ಬೆಂಗಳೂರು: ನಿನ್ನೆ ಬೆಂಗಳೂರಿನ ಜನರನ್ನು ಭಯ ಪಡಿಸಿದ್ದ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕುತ್ತಿಗೆಗೆ ಹಗ್ಗದಿಂದ ಬಿಗಿದು ಉಸಿರುಗಟ್ಟಿಸಿ ಬಳಿಕ ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದರು. ಪೊಲೀಸರು ಪ್ರಕರಣ ಹಿನ್ನೆಲೆ ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದ್ದು, ವೈಯಕ್ತಿಕ ಜೀವನ, ವೃತ್ತಿ ಜೀವನ, ಹಣಕಾಸು ( ಆರ್ಥಿಕ ) ಜೀವನ ಈ ಮೂರು ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ. ಪ್ರತಿಮಾ ಕಾರು ಚಾಲಕನಾಗಿದ್ದ ಕಿರಣ್​​ನನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಡೆದಿದ್ದೇನು?: ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ. ಕಿರಣ್ ಕಳೆದ ಐದು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಮಾಡುತ್ತಿದ್ದ. ಕಿರಣ್ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಚಾಲಕಾರಿದ್ದರು. ಪ್ರತಿಮಾ ಅವರು ಕಿರಣ್​ನನ್ನು ಕೆಲಸದಿಂದ ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಿರಣ್​ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಗಮನಿಸಬೇಕಾದ ಅಂಶ ಅಂದರೆ ಕೃತ್ಯ ನಡೆದ ಬಳಿಕ ಕಿರಣ್ ಚಾಮರಾಜನಗರ ಕಡೆಗೆ ಎಸ್ಕೇಪ್ ಆಗಿದ್ದ ಎಂದು ತಿಳಿದುಬಂದಿದೆ.

ಕಿರಣ್​ ಮೇಲೆ ಪೊಲೀಸರು ಹೆಚ್ಚು ಅನುಮಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಈತನ್ನು ಬಂಧಿಸುವ ಸಾಧ್ಯತೆಗಳಿವೆ. ಒಂದು ವೇಳೆ ಅರೆಸ್ಟ್ ಮಾಡಿದರೆ ಮೊದಲು ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಿಚಾರಣೆ ಮಾಡಬೇಕಿದೆ ಎಂದು ಕಸ್ಟಡಿಗೆ ಕೇಳುವ ಸಾಧ್ಯತೆಗಳು ಹೆಚ್ಚಿವೆ.

ಪ್ರಕರಣದ ಹಿನ್ನೆಲೆ:  ಶನಿವಾರ ಸಂಜೆ 7.30ರ ಸುಮಾರಿಗೆ ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್ಮೆಂಟ್‌ನ ಮನೆಗೆ ನುಗ್ಗಿ ಗಣಿ ಭೂವಿಜ್ಙಾನ ಇಲಾಖೆ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ ಅವರನ್ನು ಕೊಲೆ ಮಾಡಲಾಗಿತ್ತು. ಹಗ್ಗದಿಂದ ಕುತ್ತಿಗೆಗೆ ಬಿಗಿದು ಬಳಿಕ ಚಾಕುವಿನಿಂದ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿದ್ದು, ಇದೀಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.  ಈ ಪ್ರಕರಣವನ್ನು ಬಗೆದಷ್ಟು ಬೇರೆ ಬೇರೆ ಆಯಾಮಗಳನ್ನು ತೆಗೆದುಕೊಳ್ಳುತ್ತಿದೆ.  ಈ ಕೂರಿತಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net