

ಕೊಕ್ಕಡ: ಗ್ರಾಮದ ಸೌತಡ್ಕ ಸಮೀಪದ ಗೇರು ಹಾಡಿಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಬೆಂಗಳೂರು ಮೂಲದ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿಂಗಪ್ಪ (64) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು 2-3 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸೌತಡ್ಕ ಸಮೀಪದ ಗೇರು ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸ್ಥಳೀಯರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಧರ್ಮಸ್ಥಳ ಠಾಣಾಧಿಕಾರಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದಾಗ, ಆತ ಧರಿಸಿದ್ದ ಅಂಗಿಯಲ್ಲಿ ಎಟಿಎಂ ಕಾರ್ಡ್ ದೊರಕಿತ್ತು. ಆ ಮೂಲಕ ಆತನ ಹೆಸರು ಮತ್ತು ವಿಳಾಸ ಪತ್ತೆ ಹಚ್ಚಲಾಯಿತು. ಆತ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿರುವ ಬಗ್ಗೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಆತನ ಕುಟುಂಬಸ್ಥರು ಮೇ 27ರಂದು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಈ ವಿಷಯ ತಿಳಿದು ನಿಂಗಪ್ಪ ಕುಟುಂಬಸ್ಥರಿಗೆ ಆತ್ಮಹತ್ಯೆಯ ಮಾಹಿತಿ ನೀಡಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.