ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ; 8 ಕಾರು ಜಖಂ

Multiple Cars Collision On Busy Bengaluru Road
Published on

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದ ರಸ್ತೆಯ ದೊಡ್ಡಜಾಲ ಬಳಿ ಭಾರೀ ಅಪಘಾತದಲ್ಲಿ ಹಲವಾರು ವಾಹನಗಳು ಒಂದರ ನಂತರ ಒಂದರಂತೆ ಡಿಕ್ಕಿ ಹೊಡೆದವು. ದೊಡ್ಡಜಾಲ ಮೇಲ್ಸೇತುವೆ ಮೇಲೆ ಸೋಮವಾರ ಸಂಜೆ ಈ ಘಟನೆ ನಡೆದಿದೆ.

ಈ ಸರಣಿ ಅಪಘಾತದಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಆದರೆ, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಕಾರುಗಳು ವೊಂದಕ್ಕೊಂದು ಗುದ್ದಿಕೊಂಡು ಜಖಂ ಆಗಿವೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ, ಇದರಲ್ಲಿ ಕನಿಷ್ಠ 8 ಕಾರುಗಳು ಪರಸ್ಪರ ಡಿಕ್ಕಿ ಹೊಡೆದು ಜಖಂ ಕೊಂಡಿರುವುದನ್ನು ಗಮನಿಸಬಹುದಾಗಿದೆ.

ಈ ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಚಿಕ್ಕಜಾಲ ಸಂಚಾರ ಠಾಣೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಅಧಿಕಾರಿಗಳು ಕ್ಷಿಪ್ರವಾಗಿ ಕಾರ್ಯನಿರ್ವಹಿಸಿದ ನಂತರ ಟ್ರಾಫಿಕ್​​ ಜಾಮ್ ಅನ್ನು ತೆರವುಗೊಳಿಸಲಾಗಿದೆ.

ಮಾಧ್ಯಮ ವರದಿಗಳ ಪ್ರಕಾರ, ಮಾರುತಿ ಓಮ್ನಿ ವಾಹನದ ಚಾಲಕ ಹಠಾತ್ ಬ್ರೇಕ್ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ಕಾರುಗಳು ಒಂದಕ್ಕೊಂದು ಡಿಕ್ಕಿಯಾಗಿವೆ. ಈ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net