ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ್ರು ನಿವೃತ್ತ ಡಿವೈಎಸ್​ಪಿ

Hanumantappa Rtd DYSP
Published on

ಬೆಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಬೆಂಗಳೂರಿನ ವಿಜಯನಗರ ಎಂಸಿ ಲೇಔಟ್​ನಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹನುಮಂತಪ್ಪ ಎಂದು ಗುರುತಿಸಲಾಗಿದೆ. ಇವರು ಡಿವೈಎಸ್​ಪಿ ಆಗಿ ನಿವೃತ್ತರಾದವರು.

ಹನುಮಂತಪ್ಪ ಮಾಗಡಿರಸ್ತೆ, ಬ್ಯಾಟರಾಯನಪುರ ಠಾಣೆಯಲ್ಲಿ ಇನ್ಸ್​​ಪೆಕ್ಟರ್ ಆಗಿದ್ದರು. ಯಶವಂತಪುರದಲ್ಲಿ ಎಸಿಪಿಯಾಗಿ ಕೂಡ ಕರ್ತವ್ಯ ನಿರ್ವಹಿಸಿದ್ದರು. ಸದ್ಯ ವಿಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ತೀವ್ರ ಅನಾರೋಗ್ಯಕ್ಕೆ ಈಡಾಗಿದ್ದ ಹನುಮಂತಪ್ಪ ಬ್ಲಡ್ ಕ್ಯಾನ್ಸರ್​​ನಿಂದ ಬಳಲಿದ್ದರು. ಇದೇ ವಿಚಾರವಾಗಿ ಮಾನಸಿಕ‌ ಖಿನ್ನತೆಗೂ ಒಳಗಾಗಿದ್ರು ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಆಪ್ತರು ಹೇಳಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net