

Weather report: ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ಮಂಡ್ಯ, ಬೆಂಗಳೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುತ್ತದೆ ಎಂದು ತನ್ನ ಅಧೀಕೃತ ವೆಬ್ಸೈಟ್ನಲ್ಲಿ ಹವಮಾನ ಇಲಾಖೆ ವರದಿ ಮಾಡಿದೆ.
ಬೆಂಗಳೂರು ನಗರ ಮತ್ತು ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಜನರಿಗೆ ತೀವ್ರ ಪರಿಣಾಮ ಬೀರುತ್ತದೆ ಎಂದು ಐಎಂಡಿ ಎಚ್ಚರಿಸಿದೆ. ಅವರ ಪ್ರಕಾರ, ತಗ್ಗು ಪ್ರದೇಶದಲ್ಲಿ ನೀರು ನಿಲ್ಲುತ್ತದೆ ಹಾಗೂ ಪ್ರವಾಹ ಉಂಟಾಗುತ್ತದೆ. ಕರಾವಳಿ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಬಹುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುರಿಯುವ ಮಳೆಯಿಂದಾಗಿ ವಾಹನಗಳ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ನೀರು ನಿಲ್ಲುವುದರಿಂದ ಸವಾರರಲ್ಲಿ ಸ್ವಲ್ಪ ಅಡಚಣೆಗಳು ಉಂಟಾಗಬಹುದು. ಆದರಿಂದ ನಿಧಾನಕ್ಕೆ ಚಲಿಸಿ ಎಂದು ಐಎಂಡಿ ಸೂಚನೆ ನೀಡಿದೆ.
ಬೆಂಗಳೂರಿನ ಸಂಚಾರ ಮತ್ತು ಗುಂಡಿಗಳು ಕುಖ್ಯಾತಿ ಪಡೆದಿದ್ದು, ಕಳೆದ ವಾರದಿಂದ ಸಿಎಂ ಸಿದ್ಧರಾಮಯ್ಯ ಗುಂಡಿಗಳಿಂದ ಕೂಡಿದ ರಸ್ತೆಗಳಿಗಳ ಟೀಕೆಗೆ ಗುರಿಯಾಗಿದ್ದಾರೆ.
ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್-ಶಾ ಇತ್ತೀಚೆಗೆ ಇವುಗಳನ್ನು ಮತ್ತು ಐಟಿ ಕೇಂದ್ರದಲ್ಲಿನ ಕಳಪೆ ತ್ಯಾಜ್ಯ ನಿರ್ವಹಣೆಯನ್ನು ಎತ್ತಿ ತೋರಿಸಿದರು. ಇದರ ನಂತರ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉತ್ತರಿಸಿದರು. ರಸ್ತೆ ದುರಸ್ಥಿಗಾಗಿ 1, 100 ಕೋಟಿ ಮಂಜೂರಾಗಿದೆ. 10 ಸಾವಿರಕ್ಕೂ ಹೆಚ್ಚು ಗುಂಡಿಗಲನ್ನು ಗುರುತಿಸಲಾಗಿದ್ದು, 5 ಸಾವಿರಕ್ಕೂ ಹೆಚ್ಚು ಗುಂಡಿಗಳಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದರು. (ಏಜೆನ್ಸೀಸ್)