ಹವಾಮಾನ ವರದಿ: ಕರ್ನಾಟಕದ ಈ ಪ್ರದೇಶಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯ ಸಾಧ್ಯತೆ – ಎಚ್ಚರಿಕೆ ವಹಿಸಿ! |Bengaluru Weather Update

untitled-design-2025-09-23t115002335-68d23c2fc270e
Published on

Bengaluru Weather Update: ನೈಋತ್ಯ ಮಾನ್ಸೂನ್ ಸಕ್ರಿಯವಾಗಿರುವುದರಿಂದ ನಗರದಲ್ಲಿ ತಾಪಮಾನ ತೀವ್ರವಾಗಿ ಕುಸಿದಿದ್ದು, ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಸೆಪ್ಟೆಂಬರ್ 23, 2025 ರಂದು ಮಂಗಳವಾರ ಸಾಧಾರಣ ಮಳೆಯಾಗಲಿದೆ. ಹಾಗೂ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ದಿನವಿಡೀ ಇದೇ ರೀತಿ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ನಗರದಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21 ಡಿಗ್ರಿ ಸೆಲ್ಸಿಯಸ್ ಮತ್ತು 25 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಇಡೀ ದಿನ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿ ಮಾಡಿದೆ.

KSNDMC X ನಲ್ಲಿ ಹವಾಮಾನ ವರದಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ತನ್ನ ಅಧೀಕೃತ X ಖಾತೆಯಲ್ಲಿ ಏಳು ದಿನಗಳ ಹವಾಮಾನ ವರದಿಯನ್ನು ಹಂಚಿಕೊಂಡಿದೆ. ಇದರಲ್ಲಿ ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸೆಪ್ಟೆಂಬರ್​ 26 ರಿಂದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆ ಎಂದು ವರದಿ ಮಾಡಿದೆ.

ತಾಪಮಾನದ ಆರ್ದ್ರತೆಯು ಸುಮಾರು ಶೇ. 88 ರಷ್ಟಿರುವ ನಿರೀಕ್ಷೆಯಿದೆ. ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಸುಮಾರು 30 ರಷ್ಟಿರುವ ನಿರೀಕ್ಷೆಯಿದೆ. ಇದು ನಗರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮ ಗಾಳಿಯ ಗುಣಮಟ್ಟವನ್ನು ಸೂಚಿಸುತ್ತದೆ. ವಾಯು ಗುಣಮಟ್ಟ ಸೂಚ್ಯಂಕ ದಿನವಿಡೀ ಒಂದೇ ಆಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

IMD ಸಲಹೆ ಏನು?

ಈ ಮಳೆಯಿಂದಾಗಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯವಾಗಬಹುದು. ಹಾಗೆಯೇ ಸಣ್ಣ ಪ್ರಮಾಣದ ಸಂಚಾರ ದಟ್ಟಣೆ ಮತ್ತು ದುರ್ಬಲವಾದ ಮರದ ಕೊಂಬೆಗಳು ಧರೆಗುರುಳುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ನಿವಾಸಿಗಳು ಮನೆಯೊಳಗೆ ಇದ್ದು ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚುವಂತೆ ಸಲಹೆ ನೀಡಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net