27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‌ಶಿಪ್ ಪಂದ್ಯಕ್ಕೆ ಚಾಲನೆ

17 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದ ಕ್ರೀಡಾಪಟುಗಳು ಭಾಗಿ,
poice lawn championship
poice lawn championship
Published on: 

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇತೃತ್ವದಲ್ಲಿ ನಗರದಲ್ಲಿ ಆಯೋಜಿಸಲಾಗಿರುವ 27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‌ಶಿಪ್ ಪಂದ್ಯಾವಳಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೋಮವಾರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರ ಪೊಲೀಸ್ ಸಂಸ್ಥೆಗಳ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಈ ಕ್ರೀಡಾಕೂಟವು ಕ್ರೀಡಾಸ್ಫೂರ್ತಿ, ಪರಸ್ಪರ ಸ್ನೇಹ ಹಾಗೂ ಸೌಹಾರ್ದತೆ ಬೆಳೆಸುವ ಮಹತ್ವದ ವೇದಿಕೆಯಾಗಿದೆ.

ಈ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ದೇಶದ 17 ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶ, ಆರು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಹಾಗೂ ಮೂರು ಕೇಂದ್ರ ಪೊಲೀಸ್ ಸಂಸ್ಥೆಗಳನ್ನು ಪ್ರತಿನಿಧಿಸುವ ಒಟ್ಟು 180 ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸುತ್ತಿರುವುದು ವಿಶೇಷವಾಗಿದೆ. ಪೊಲೀಸ್ ಅಧಿಕಾರಿಗಳ ವೃತ್ತಿಪರ ಜವಾಬ್ದಾರಿಗಳ ಜತೆಗೆ ದೈಹಿಕ ಕ್ಷಮತೆ, ಮಾನಸಿಕ ಆರೋಗ್ಯ ಮತ್ತು ಕ್ರೀಡಾಸಕ್ತಿಯನ್ನು ಉತ್ತೇಜಿಸುವಲ್ಲಿ ಇಂತಹ ಪಂದ್ಯಾವಳಿಗಳ ಮಹತ್ವದ ಪಾತ್ರ ವಹಿಸುತ್ತವೆ ಎಂದು ಸಚಿವರು ಹೇಳಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿರುವ ಎಲ್ಲ ತಂಡಗಳು ಹಾಗೂ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಈ ವೇಳೆ ಅಂತರಾಷ್ರೀಯ ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ, ರಾಜೇಂದರ್ ಕುಮಾರ್ ಕಟಾರಿಯಾ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಜಿಬಿಎ ಆಯುಕ್ತ ಎಂ. ಮಹೇಶ್ವರ ರಾವ್ ಸೇರಿ ಇತರರು ಪಾಲ್ಗೊಂಡಿದ್ದರು.