ಕಾರ್ಪೋರೇಷನ್ ವ್ಯಾಪ್ತಿಯಲ್ಲಿ ಒಟ್ಟು 19 ಪದವಿಪೂರ್ವ ಕಾಲೇಜುಗಳಿದ್ದು, 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 2,593 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 1,923 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳ ಪೈಕಿ 260 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.