ಮತದಾರರ ನೋಂದಣಿಗೆ ವೇಗ ನೀಡಲು ಸಲಹೆ

ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಸಭೆ ಸೋಮವಾರ ನಡೆಯಿತು.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಸಭೆ ಸೋಮವಾರ ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಪೂರ್ವ ಸಿದ್ಧತೆ
  • ವಿಧಾನಸಭೆ ಕ್ಷೇತ್ರವಾರು ಪ್ರಮುಖರನ್ನು ಒಳಗೊಂಡ ಮೇಲ್ವಿಚಾರಣೆ ಸಮಿತಿ
  • ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾರ್ಯತಂತ್ರ ರೂಪಿಸಿದ್ದೇವೆ ಎಂದ ವಿಜಯೇಂದ್ರ
ಬೆಂಗಳೂರು: ಯಾರಿಗೂ ಯಾವುದೇ ಕ್ಷೇತ್ರ ಭದ್ರಕೋಟೆ ಎಂಬುದಿಲ್ಲ. ಒಗ್ಗಟ್ಟಿನ ಪ್ರಯತ್ನ, ತಂಡಸ್ಪೂರ್ತಿಯಿಂದ ಶ್ರಮಿಸುವುದು ಮುಖ್ಯವಾಗಿದೆ.
ಗೆಲುವಿನ ಗುರಿ ಸಾಧಿಸಲು ಅತ್ಯಧಿಕ ಮತದಾರರ ನೋಂದಣಿಯು ಗುರಿಯಾಗಬೇಕು ಎಂದು ಬಿಜೆಪಿ ಪೂರ್ವಸಿದ್ಧತಾ ಸಭೆ (BJP meeting) ಸೂಚಿಸಿದೆ.
ಪಕ್ಷದ ರಾಜ್ಯ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈವಿಜಯೇಂದ್ರ ಅಧ್ಯಕ್ಷತೆಯಲ್ಲಿ ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಪೂರ್ವ ತಯಾರಿ ಸಭೆ ಸೋಮವಾರ ನಡೆಯಿತು.
ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಮಹಾನಗರದ 28 ವಿಧಾನಸಭಾ ಕ್ಷೇತ್ರಗಳನ್ನು ಈ ಒಳಗೊಂಡಿದೆ. ಈಗಾಗಲೇ 26 ಸಾವಿರ ಶಿಕ್ಷಕರು ಯಾದಿಗೆ ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.
ಈ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸಲು ತಿಳಿಸಲಾಯಿತು. ಪರಿಣಾಮಕಾರಿಯಾಗಿ ನಿರ್ವಹಿಸಲು ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ಸಂಚಾಲಕ, ಸಹ ಸಂಚಾಲಕರನ್ನು ಒಳಗೊಂಡ ಸಮಿತಿ ರಚಿಸಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಸರ್ಕಾರಕ್ಕೆ ಬಿಸಿ ಮುಟ್ಟಿಸುವೆವು

ಸಭೆಯ ನಂತರ ಬಿ.ವೈ.ವಿಜಯೇಂದ್ರ ಸುದ್ದಿಗಾರರೊಂದಿಗೆ ಮಾತನಾಡಿ ಜನಪರ ಕೆಲಸಗಳು, ಅಭಿವೃದ್ಧಿ ಕಾರ್ಯ, ರೈತರ ಸಂಕಷ್ಟವನ್ನು ಮರೆತು ಕುರ್ಚಿ ಕಿತ್ತಾಟದಲ್ಲಿ ಮಗ್ನವಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ತೀರ್ಮಾನಿಸಿದ್ದೇವೆ.
ವಿಧಾನಮಂಡಲದ ಉಭಯ ಸದನಗಳಲ್ಲಿ ಮಿತ್ರಪಕ್ಷಗಳು ಒಗ್ಗಟ್ಟಿನ ಹೋರಾಟ ನಡೆಸಿ, ಸರ್ಕಾರದ ಕಿವಿಹಿಂಡುವ ಕೆಲಸ ಮಾಡಲಿದ್ದೇವೆ. ರಚನಾತ್ಮಕ ಪ್ರತಿಪಕ್ಷದ ಜವಾಬ್ದಾರಿ ನಿರ್ವಹಿಸಲು ಬದ್ಧವಾಗಿ, ವೈಲ್ಯಗಳನ್ನು ಎತ್ತಿ ತೋರಿಸಲಿದ್ದೇವೆ ಎಂದರು.
ವಿವಿಧ ವಿಷಯಗಳನ್ನು ಪಟ್ಟಿ ಮಾಡಿಕೊಂಡಿದ್ದೇವೆ. ಬಿಜೆಪಿ-ಜೆಡಿಎಸ್ ಒಟ್ಟಾಗಿ ಕಾರ್ಯತಂತ್ರವನ್ನು ಹೆಣೆದಿದ್ದೇವೆ. ಸರ್ಕಾರ ಎಡವಿದ್ದೆಲ್ಲಿ ? ಎಂದು ತೋರಿಸಿ, ಜನಪರ ಕೆಲಸ ಮಾಡುವುದಕ್ಕೆ ಒತ್ತಡ ಹೇರಲಿದ್ದೇವೆ ಎಂದು ಹೇಳಿದರು.
ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗಾಗಿ ಮತದಾರರ ನೋಂದಣಿ ಪ್ರಕ್ರಿಯೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಹಿರಿಯರ ಸಭೆ ನಡೆಸಿ, ಶಾಸಕರ ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net