ಮೇ 12ರಂದು ಬೆಂಗಳೂರು ಕೃಷಿ ವಿವಿ ಘಟಿಕೋತ್ಸವ

convocation
convocation
Published on

ಪ್ರಮುಖ ಮುಖ್ಯಾಂಶಗಳು

  • ಯುಜಿಸಿ ಮಾಜಿ ಅಧ್ಯಕ್ಷ ಡಾ. ಜಗದೀಶ್ ಕುಮಾರ್ ಪ್ರಧಾನ ಭಾಷಣ
  • ರಾಜ್ಯಪಾಲ ಗೆಹಲೋತ್​​​​ ಅವರಿಂದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ (ಯುಎಎಸ್-ಬಿ) 60ನೇ ಘಟಿಕೋತ್ಸವ ಸಮಾರಂಭವು ಮೇ 12ರಂದು ವಿವಿಯ ಕ್ಯಾಂಪಸ್ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಆವರಣದಲ್ಲಿರುವ ಡಾ. ಬಾಬು ರಾಜೇಂದ್ರಪ್ರಸಾದ್ ಅಂತಾರಾಷ್ಟ್ರೀಯ ಸಮಾವೇಶ ಭವನದಲ್ಲಿ ನಡೆಯಲಿದೆ.
ಕೃಷಿ ವಿವಿಯ ಕುಲಾಧಿಕಪತಿಯೂ ಆದ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಹ ಕುಲಾಧಿಪತಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ. ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಮಾಜಿ ಅಧ್ಯಕ್ಷ ಡಾ. ಎಂ.ಜಗದೀಶ್ ಕುಮಾರ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಜತೆಗೆ ವಿವಿಯ ಕುಲಪತಿ ಡಾ. ಎಸ್.ವಿ. ಸುರೇಶ್, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿರುತ್ತಾರೆ ಎಂದು ಯುಎಎಸ್-ಬಿ ಅಧಿಕಾರಿಗಳು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net