ಅರ್ಜಿ ನಮೂನೆಗಳು ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಜಿಕೆವಿಕೆ ವಿಸ್ತರಣಾ ನಿರ್ದೇಶಕರ ಕಚೇರಿ ಹಾಗೂ ದೊಡ್ಡಬಳ್ಳಾಪುರ, ಮಾಗಡಿ, ತಿಪಟೂರು ಮತ್ತು ಚಿಂತಾಮಣಿಯ ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ಹಾಗೂ ವಿಶ್ವವಿದ್ಯಾಲಯದ ವೆಬ್ಸೈಟ್ನಲ್ಲೂ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜು.31 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ವಿವರಗಳಿಗಾಗಿ ವಿಸ್ತರಣಾ ನಿರ್ದೇಶಕರ ಕಚೇರಿ, ಕೃಷಿ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಂಗಳೂರು-560065 ಇವರನ್ನು ಖುದ್ದಾಗಿ ಅಥವಾ ದೂ: 080-23330153 (ವಿಸ್ತರಣೆ: 401) ಮೂಲಕ ಸಂಪರ್ಕಿಸಬಹುದಾಗಿದೆ ಎಂದು ವಿವಿಯ ಅಧಿಕಾರಿಗಳು ತಿಳಿಸಿದ್ದಾರೆ.