ಬೆಂ ನಗರ ಜಿಲ್ಲೆ: 13.65 ಕೋಟಿ ರೂ. ಮೌಲ್ಯದ ಅಕ್ರಮ ಒತ್ತುವರಿ ತೆರವು
ಜಿಲ್ಲಾಧಿಕಾರಿ ಜಿ. ಜಗದೀಶ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
2 ಎಕರೆ 3 ಗುಂಟೆ ಸರ್ಕಾರಿ ಜಮೀನನ್ನು ಜಿಲ್ಲಾಧಿಕಾರಿ ಜಿ. ಜಗದೀಶ ಅವರ ನೇತೃತ್ವದಲ್ಲಿ ತೆರವು
ಅಕ್ರಮವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಗೋಮಾಳ ತೆರವು ಕಾರ್ಯಾಚರಣೆ
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ 13.65 ಕೋಟಿ ರೂ. ಅಂದಾಜು ಮೌಲ್ಯದ 2 ಎಕರೆ 3 ಗುಂಟೆ ಸರ್ಕಾರಿ ಜಮೀನನ್ನು ಜಿಲ್ಲಾಧಿಕಾರಿ ಜಿ. ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.
ಜಿಲ್ಲೆಯಾದ್ಯಂತ ವಿವಿಧ ತಾಲೂಕುಗಳ ತಹಶೀಲ್ದಾರ್‌ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗುಂಡುತೋಪು, ರಾಜಕಾಲುವೆ, ಸ್ಮಶಾನ, ಖರಾಬು, ತೋಪು, ಗೋಮಾಳ ರಸ್ತೆ, ಹುಲ್ಲುಬನ್ನಿ, ಸರ್ಕಾರಿ ಮತ್ತು ಸರ್ಕಾರಿ ಗೋಮಾಳ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.