ಪೀಕ್ ಅವರ್ಗಳಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಬಿಎಂಆರ್ಸಿಎಲ್ ಯೋಜನೆ
ವಿಜಯವಾಣಿ ಸುದ್ದಿಜಾಲ ಬೆಂಗಳೂರು
ನಮ್ಮ ಮೆಟ್ರೋದ ಹಳದಿಮಾರ್ಗದಲ್ಲಿ ರೈಲುಗಳ ಸಂಖ್ಯೆಯನ್ನು ಹೆಚ್ಚಿಸಿದ ಪರಿಣಾಮ, ಆನೇಕಲ್ ಹಾಗೂ ಬೊಮ್ಮಸಂದ್ರ ಮೆಟ್ರೋ ನಿಲ್ದಾಣದ ನಡುವೆ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದು, ಪೀಕ್ ಅವರ್ಗಳಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ತಿಳಿಸಿದೆ.
ರಾಷ್ಟ್ರೀಯ ವಿದ್ಯಾಲಯ ರಸ್ತೆಯಿಂದ ಬೊಮ್ಮಸಂದ್ರವರೆಗೆ ಸಂಚರಿಸುವ ಹಳದಿ ಮಾರ್ಗದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಅಂತಿಮ ಹಂತದ ಸಂಪರ್ಕವನ್ನು ಸುಧಾರಿಸುವ ಉದ್ದೇಶದಿಂದ, ಬಿಎಂಆರ್ಸಿಎಲ್ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪರಸ್ಪರ ಸಂಯೋಜನೆ ಮಾಡಿಕೊಂಡು ವಿಶೇಷ ಫೀಡರ್ ಬಸ್ ಸೇವೆಗಳನ್ನು ಪರಿಚಯಿಸಿದೆ.
ಈ ಯೋಜನೆಯ ಭಾಗವಾಗಿ, ದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ, ಬಿಎಂಟಿಸಿ ವತಿಯಿಂದ 4 ವಿಶೇಷ ಮೆಟ್ರೋ ಫೀಡರ್ ಬಸ್ ಸೇವೆಗಳನ್ನು ಬೊಮ್ಮಸಂದ್ರ ಮೆಟ್ರೋ ನಿಲ್ದಾಣದಿಂದ ಸಮೀಪದ ವಸತಿ ಹಾಗೂ ವಾಣಿಜ್ಯ ಪ್ರದೇಶಗಳಿಗೆ ಸೋಮವಾರ ಆರಂಭಿಸಲಾಗಿದೆ.