ಜು.6ರಿಂದ ಜಲಮಂಡಳಿ ನೇಮಕಾತಿ ದಾಖಲೆ ಪರಿಶೀಲನೆ| bwssb

ಜಲಮಂಡಳಿ
ಜಲಮಂಡಳಿ
Published on
ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್​ಎಸ್​ಬಿ) ನೇರ ನೇಮಕಾತಿ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ ಜು.6ರಿಂದ ಆರಂಭವಾಗಲಿದೆ. ನೇರ ನೇಮಕಾತಿಯ ಆರ್​ಪಿಸಿ ಹಾಗೂ ಕಲ್ಯಾಣ ಕರ್ನಾಟಕ ವೃಂದಗಳ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ದಾಖಲಾತಿ ಪರಿಶೀಲನೆಗೆ ಆಹ್ವಾನಿಸಲಾಗಿದೆ.
ಜು.6ರಿಂದ 24ರವರೆಗೆ ವಿವಿಧ ದಿನಾಂಕಗಳಲ್ಲಿ ವೃಂದವಾರು ದಾಖಲಾತಿಗಳ ಪರಿಶೀಲನೆ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿರುವ ದಿನಾಂಕ, ಸಮಯಕ್ಕೆ ಅಗತ್ಯ ಮೂಲ ಹಾಗೂ ಪೂರಕ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಮಂಡಳಿ ಸೂಚಿಸಿದೆ.
ದಾಖಲೆ ಪರಿಶೀಲನೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿ, ದಿನಾಂಕ, ಸಮಯ, ಸ್ಥಳ ಸೇರಿ ಸಂಪೂರ್ಣ ಮಾಹಿತಿಯನ್ನು ಮಂಡಳಿಯ ಅಧಿಕೃತ ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net