ಬೆಂಗಳೂರು: ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಗುರುವಾರ ಸಂಜೆ ರೈಲಿನ ಬಾಗಿಲು ಸರಿಯಾಗಿ ಮುಚ್ಚದ ಹಿನ್ನೆಲೆಯಲ್ಲಿ ಸೇವೆಯಲ್ಲಿ ಕೆಲ ಕಾಲ ವ್ಯತ್ಯಯ ಉಂಟಾಗಿತ್ತು. ಈ ಘಟನೆಯ ಕುರಿತು ನಡೆಸಲಾದ ಪ್ರಾಥಮಿಕ ತನಿಖೆಯಲ್ಲಿ ಘಟನೆಯ ಕಾರಣ ಪತ್ತೆಯಾಗಿದೆ.
ಪ್ರಯಾಣಿಕರೊಬ್ಬರ ಲೋಹದ ಸರ ರೈಲಿನ ಬಾಗಿಲಿಗೆ ಸಿಲುಕಿದ್ದರಿಂದ ಬಾಗಿಲುಗಳು ಸರಿಯಾಗಿ ಮುಚ್ಚಲು ಸಾಧ್ಯವಾಗದ ಪರಿಣಾಮ ಕಾರ್ಯಾಚರಣೆಯಲ್ಲಿ ತಾತ್ಕಾಲಿಕ ವಿಳಂಬ ಉಂಟಾಗಿತ್ತು.
ರೈಲು ಹಾಗೂ ಅದರ ಬಾಗಿಲಿನ ವ್ಯವಸ್ಥೆಯ ಸಮಗ್ರ ತಾಂತ್ರಿಕ ಪರಿಶೀಲನೆಯ ನಂತರ, ರೈಲಿನ ಉಪಕರಣಗಳಲ್ಲಿ ಯಾವುದೇ ತಾಂತ್ರಿಕ ದೋಷ ಇಲ್ಲ ಎಂದು ದೃಢಪಟ್ಟಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.