ರೈತರ ಸಮಸ್ಯೆಗಳು ಬಗೆಹರಿದಿಲ್ಲ, ರಸ್ತೆ ಗುಂಡಿಗಳು ಮುಚ್ಚಿಲ್ಲ
ಉಪಾಹಾರ ಸಭೆ, ಕಾಂಗ್ರೆಸ್ ಹೈಕಮಾಂಡ್ ಚಿತ್ರಕತೆ-ನಿರ್ದೇಶನ
ಬೆಂಗಳೂರು: ರೈತರು ಎದುರಿಸುತ್ತಿರುವ ಸಂಕಷ್ಟ, ಜನರ ಸಮಸ್ಯೆಗಿಂತ ಸಿಎಂ, ನಡುವಿನ ಸಮಸ್ಯೆಯೇ ಕಾಂಗ್ರೆಸ್ ಹೈಕಮಾಂಡ್‌ಗೆ ಜಟಿಲವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಕಟುವಾಗಿ ಟೀಕಿಸಿದರು.
ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿಯು ೋಷಣೆಗಳು, ಕಾರ್ಯಕ್ರಮಗಳಿಗೆ ಸೀಮಿತವಾಗಿವೆ. ಕನಿಷ್ಠಪಕ್ಷ ರಸ್ತೆ ಗುಂಡಿಗಳನ್ನು ಮುಚ್ಚಲೂ ಸಾಧ್ಯವಾಗಿಲ್ಲ ಎಂದು ಹರಿಹಾಯ್ದರು.
ರೈತರ ಸಮಸ್ಯೆ ಬಗೆಹರಿಸಿಲ್ಲ, ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಆರ್.ಅಶೋಕ್ ಛೇಡಿಸಿದರು.
ಹನುಮ ಜಯಂತಿ ದಿನ ನಾಟಿಕೋಳಿ ತಿಂದರು
ಹನುಮ ಜಯಂತಿಯ ದಿನದಂದು ಎಲ್ಲೆಡೆ ಸಂಭ್ರಮದ ಆಚರಣೆ ನಡೆಯುತ್ತಿದ್ದರೆ, ಸಿಎಂ ಸಿದ್ದರಾಮಯ್ಯ ನಾಟಿಕೋಳಿಯ ಸಾರು ಸವಿದಿದ್ದಾರೆ. ಸಿಎಂ ಬ್ರೇಕ್‌ಾಸ್ಟ್‌ಗೆ ಕನಕಪುರದ ನಾಟಿಕೋಳಿ ಮರ್ಡರ್ ಆಗಿದೆ. ಸಿದ್ದರಾಮಯ್ಯನವರ ಈ ನಡೆಯಿಂದ ಎಲ್ಲ ಹನುಮ ಭಕ್ತರ ಮನಸ್ಸಿಗೆ ನೋವಾಗಿದೆ ಎಂದರು.
ಒಮ್ಮೆ ಸಿಎಂ, ಮಗದೊಮ್ಮೆ ಡಿಸಿಎಂ ಮನೆಯಲ್ಲಿ ಉಪಾಹಾರ ಸಭೆ ನಡೆದಿದೆ. ಕಾಂಗ್ರೆಸ್ ಹೈಕಮಾಂಡ್ ಚಿತ್ರಕತೆಯಿದು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ವೇಣುಗೋಪಾಲ್ ಈ ಪ್ರಹಸನವನ್ನು ನಿರ್ದೇಶನ ಮಾಡಿದ್ದಾರೆ ಎಂದು ತಿವಿದರು.
ನಾನು ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆಂದು ಡಿ.ಕೆ.ಶಿವಕುಮಾರ್ ಹೇಳಿದ್ದರು. ಆದರೆ ಈಗ ಅವರು ಉಪಾಹಾರ ಸವಿದಿದ್ದಾರೆ. ಈ ನಡುವೆ ಡಾ.ಜಿ.ಪರಮೇಶ್ವರ್ ಬಹಳ ನೋವಿನಿಂದ ಮಾತಾಡಿದ್ದಾರೆ ಎಂದು ಮರುಕ ವ್ಯಕ್ತಪಡಿಸಿದರು.
ತಿಂಡಿ ತಿನ್ನುವ ಸಮಯವನ್ನು ರಸ್ತೆಗುಂಡಿ ಮುಚ್ಚಿಸಲು ವಿನಿಯೋಗಿಸಿದ್ದರೆ ರಸ್ತೆ ಗುಂಡಿಗೆ ಬಿದ್ದು ಅಮಾಯಕರು ಜೀವ ಕಳೆದುಕೊಳ್ಳುವುದು ತಪ್ಪುತ್ತಿತ್ತು. ಕಬ್ಬಿನ ದರ, ಮೆಕ್ಕೆಜೋಳ ಖರೀದಿ ಕೇಂದ್ರದ ಸಮಸ್ಯೆ ಬಗೆಹರಿದಿಲ್ಲ ಎಂದು ಆರ್.ಅಶೋಕ್ ವಾಗ್ದಾಳಿ ಮಾಡಿದರು.
ಸಿಎಂ, ಡಿಸಿಎಂ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆಗಳಾಗಿವೆ. ಆದರೆ ಅಂಗನವಾಡಿ ಕಾರ್ಯಕರ್ತರು, ರೈತರು, ಉದ್ಯಮಿಗಳು, ದಲಿತರ ವಿಶ್ವಾಸವನ್ನು ಸರ್ಕಾರ ಕಳೆದುಕೊಂಡಿದೆ ಎಂದರು.
ಕಾದಿರುವ ಪರಮೇಶ್ವರ್, ಜಾರಕಿಹೊಳಿ
ಬಿಗ್‌ಬಾಸ್‌ನಲ್ಲಿ ವೈಲ್ಡ್ ಕಾರ್ಡ್‌ನಂತೆ ಸತೀಶ್ ಜಾರಕಿಹೊಳಿ ಹಾಗೂ ಡಾ.ಜಿ.ಪರಮೇಶ್ವರ್ ದಲಿತ ಬ್ರ್ಯಾಂಡ್‌ನಡಿ ಸಿಎಂ ಆಗಲು ಕಾಯುತ್ತಿದ್ದಾರೆ. ಇಡೀ ಸರ್ಕಾರ ರಿಯಾಲಿಟಿ ಶೋನಂತೆ ಆಗಿದೆ ಎಂದು ಟೀಕಿಸಿದರು.
ಬೆಂಗಳೂರು: ರೈತರು ಎದುರಿಸುತ್ತಿರುವ ಸಂಕಷ್ಟ, ಜನರ ಸಮಸ್ಯೆಗಿಂತ ಸಿಎಂ, ನಡುವಿನ ಸಮಸ್ಯೆಯೇ ಕಾಂಗ್ರೆಸ್ ಹೈಕಮಾಂಡ್‌ಗೆ ಜಟಿಲವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಟುವಾಗಿ ಟೀಕಿಸಿದರು.
ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿಯು ೋಷಣೆಗಳು, ಕಾರ್ಯಕ್ರಮಗಳಿಗೆ ಸೀಮಿತವಾಗಿವೆ. ಕನಿಷ್ಠಪಕ್ಷ ರಸ್ತೆ ಗುಂಡಿಗಳನ್ನು ಮುಚ್ಚಲೂ ಸಾಧ್ಯವಾಗಿಲ್ಲ ಎಂದು ಹರಿಹಾಯ್ದರು.
ರೈತರ ಸಮಸ್ಯೆ ಬಗೆಹರಿಸಿಲ್ಲ, ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಆರ್.ಅಶೋಕ್ ಛೇಡಿಸಿದರು.
ತುಂಗಭದ್ರಾ ಜಲಾಶಯದ ಗೇಟ್‌ಗಳ ದುರಸ್ತಿಗೆ 12 ಕೋಟಿ ರೂ. ಬಿಲ್ ಸಕಾಲಕ್ಕೆ ಪಾವತಿಸಿದ್ದರೆ ಎರಡನೇ ಬೆಳೆಗೆ ನೀರು ಲಭ್ಯವಾಗುತ್ತಿತ್ತು. ಈ ಬಗ್ಗೆ ರೈತರ ಪರವಾಗಿ ಅಧಿವೇಶನದಲ್ಲಿ ಹೋರಾಟ ಮಾಡಲಾಗುವುದು ಎಂದರು.
ಕಳೆದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಗೆ ಅನೇಕ ಭರವಸೆಗಳನ್ನು ಸರ್ಕಾರ ನೀಡಿದ್ದು, ಕೊಟ್ಟ ಮಾತನ್ನು ಈಡೇರಿಸಲಾಗಿದೆಯೆ ? ಎಂದು ಕೇಳುತ್ತೇವೆ. ಸರ್ಕಾರದ ಹಣವಿಲ್ಲ, ಆಶ್ವಾಸನೆಗಳ ಮುಖೇನ ಕಾಲ ಕಳೆಯಲಾಗುತ್ತಿದೆ ಎಂದು ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.