ನಿಗದಿತ ಅವಧಿಯೊಳಗೆ ಎಸ್‌ಐಆರ್ ಪೂರ್ಣಗೊಳಿಸಿ

sir
sir
Published on

ಪ್ರಮುಖ ಮುಖ್ಯಾಂಶಗಳು

  • ಪಾಲಿಕೆ ಅಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಸೂಚನೆ
  • ಆಯೋಗದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ತಾಕೀತು
ಬೆಂಗಳೂರು: ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಮತದಾರರ ಪಟ್ಟಿಯ ಪರಾಮರ್ಶೆಯನ್ನು ನಡೆಸಬೇಕು ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ (ಸಿಇಒ) ವಿ.ಅನ್ಬುಕುಮಾರ್ ಅವರು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಉತ್ತರ ನಗರ ಪಾಲಿಕೆಯ ಕಚೇರಿಯಲ್ಲಿ ಸೋಮವಾರ ಬೆಂಗಳೂರು ಉತ್ತರ ಚುನಾವಣಾ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈವರೆಗೆ ನಡೆದಿರುವ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಅಂಕಿ-ಅಂಶಗಳನ್ನು ಒಳಗೊಂಡ ಮಾಹಿತಿಯನ್ನು ಪರಾಮರ್ಶಿಸಿದರು.
ಸಭೆಯನ್ನು ಉದ್ಧೇಶಿಸಿ ಮಾತನಾಡಿದ ವಿ.ಅನ್ಬುಕುಮಾರ್, ವಿಧಾನಸಭಾ ಕ್ಷೇತ್ರವಾರು ಎಸ್‌ಐಆರ್ ಪ್ರಗತಿ ಪರಿಶೀಲನೆ ಕೈಗೊಂಡು ಎಲ್ಲ ಕ್ಷೇತ್ರಗಳ ಮತಗಟ್ಟೆವಾರು ಪ್ರಗತಿ ಪರಿಶೀಲಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಹಾಗೂ ನೈಜ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕ್ಷೇತ್ರವಾರು ಸಭೆ ನಡೆಸಲು ಸೂಚನೆ:

ಮತದಾರರ ನೋಂದಣಾಧಿಕಾರಿಗಳಿಗೆ ವಿಧಾನಸಭಾ ಕ್ಷೇತ್ರವಾರು ಗುರುತಿಸಲಾದ ಎಎಸ್‌ಡಿಡಿಒ ಪಟ್ಟಿಯ ವಿವರವನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಪ್ರತಿನಿತ್ಯ ನೀಡಿ ಏನಾದರೂ ಆಕ್ಷೇಪಣೆ, ಸಲಹೆಗಳನ್ನು ನೀಡಿದಲ್ಲಿ ಅವುಗಳನ್ನು ಪರಿಶೀಲಿಸಿ ಕ್ರಮ ವಹಿಸಬೇಕು. ಜತೆಗೆ ಪಕ್ಷಗಳ ಪ್ರತಿನಿಧಿಗಳೊಂದಿಗೆ ಕ್ಷೇತ್ರವಾರು ಸಭೆ ನಡೆಸುವಂತೆ ಮತದಾರರ ನೋಂದಣಾಧಿಕಾರಿಗಳಿಗೆ ವಿ.ಅನ್ಬುಕುಮಾರ್ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಂಟಿ ಮುಖ್ಯ ಚುನಾವಣಾಧಿಕಾರಿ ಯೋಗೇಶ್ವರ್, ಉತ್ತರ ಪಾಲಿಕೆಯ ಆಯುಕ್ತ ಪಿ.ಸುನೀಲ್ ಕುಮಾರ್, ಅಪರ ಆಯುಕ್ತರು (ಕಂದಾಯ ವಿಭಾಗ), ಜಂಟಿ ಆಯುಕ್ತೆ ಪಲ್ಲವಿ, ಜಂಟಿ ಆಯುಕ್ತ ಮೊಹಮ್ಮದ್ ನಯೀಮ್ ಮೊಮಿನ್ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net