ಶಿಕ್ಷಕರು, ಪದವೀಧರರಿಗೆ ಕಾಂಗ್ರೆಸ್ ವಂಚನೆ

ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ ಒಪ್ಪದ ರಾಜ್ಯ ಕಾಂಗ್ರೆಸ್​ ಸರ್ಕಾರ ರಾಜ್ಯ ಶಿಕ್ಷಣ ನೀತಿ ರೂಪಿಸುವುದಾಗಿ ಹೇಳಿತಾದರೂ ಅದನ್ನೂ ಮಾಡಲಿಲ್ಲ. ಅಸಲಿಗೆ ರಾಜ್ಯದಲ್ಲಿ ಯಾವುದೇ ಶಿಕ್ಷಣ ನೀತಿಯೇ ಇಲ್ಲ. ಇದೇನಾ ಕಾಂಗ್ರೆಸ್​ ಸರ್ಕಾರದ ಸಾಧನೆ ಎಂದು ಶಾಸಕ, ಮಾಜಿ ಸಚಿವ ಸುರೇಶ್​ ಕುಮಾರ್​ ಪ್ರಶ್ನಿಸಿದ್ದಾರೆ.
Sureshkumar
Suresh kumar
Published on: 

ಬೆಂಗಳೂರು: ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಆಶ್ವಾಸನೆಗಳನ್ನು ಈಡೇರಿಸದ ಕಾಂಗ್ರೆಸ್ ಸರ್ಕಾರ ಶಿಕ್ಷಕರು, ಪದವೀಧರರು, ನಿರುದ್ಯೋಗಿಗಳಿಗೆ ವಂಚನೆ ಮಾಡಿದೆ ಎಂದು ಬಿಜೆಪಿ ಶಾಸಕ ಎಸ್. ಸುರೇಶ ಕುಮಾರ್ ಆಪಾದಿಸಿದ್ದಾರೆ.

ಅಧಿಕಾರಕ್ಕೆ ಬಂದ ವರ್ಷದೊಳಗೆ ಅನುಮೋದಿತ ಶಿಕ್ಷಕರ ಖಾಲಿ ಹುದ್ದೆ ಭರ್ತಿ,ಯುವನಿಧಿ, ಪರೀಕ್ಷಾ ಶುಲ್ಕ ವಿನಾಯಿತಿ ಹೀಗೆ ಸಾಲು ಸಾಲು ಭರವಸೆ ನೀಡಿ ಒಂದನ್ನೂ ಕಾರ್ಯರೂಪಕ್ಕೆ ತರಲಿಲ್ಲ. ಸದ್ಯ ರಾಜ್ಯದಲ್ಲಿ 2 ಲಕ್ಷ ಶಿಕ್ಷಕರ ಹುದ್ದೆ ಖಾಲಿ ಇವೆ ಎಂದು ಭಾನುವಾರ ಬಿಜೆಪಿ- ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲಿ ದೂರಿದರು.

ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ ಒಪ್ಪದೆ ರಾಜ್ಯ ಶಿಕ್ಷಣ ನೀತಿ ತರಲು ಹೊರಟರು. ಅದು ಕೂಡ ಈಡೇರಿಲ್ಲ. ಅಸಲಿಗೆ ರಾಜ್ಯದಲ್ಲಿ ಯಾವುದೇ ಶಿಕ್ಷಣ ನೀತಿಯೇ ಇಲ್ಲ. ಇದೇನಾ ಇವರ ಸಾಧನೆ ಎಂದು ಪ್ರಶ್ನಿಸಿದರು.

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆದ ಹಗರಣ, ಪಶು ವೈದ್ಯಕೀಯ ಪರೀಕ್ಷಾ ಅಕ್ರಮ, ವಿವಿಧ ನೇಮಕಾತಿಗಳಲ್ಲಿ ನಡೆದ ಭ್ರಷ್ಟಾಚಾರ ರಾಜ್ಯವನ್ನು ತಲೆ ತಗ್ಗಿಸುವಂತೆ ಮಾಡಿದೆ ಎಂದು ಬೇಸರಿಸಿದರು.

ಪರಿಷತ್‌ನಲ್ಲಿ ಗೆಲುವಿನ ವಿಶ್ವಾಸ

ಶಿಕ್ಷಕರ, ಪದವೀದರ ಕ್ಷೇತ್ರಗಳಿಂದ ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ಈ ತಿಂಗಳ 23 ರಂದು ನಡೆಯಲಿರುವ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಎಲ್ಲ ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಲಿದ್ದಾರೆ ಎಂದು ಸುರೇಶ್‌ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಲಿಟ್ಮಸ್ ಟೆಸ್ಟ್

ಈ ಚುನಾವಣೆ ಸರ್ಕಾರಕ್ಕೆ ಲಿಟ್ಮಸ್ ಪರೀಕ್ಷೆ ಇದ್ದಂತೆ. ಬಿಜೆಪಿ-ಜೆಡಿಎಸ್ ಕಾರ್ಯಕತರ್ಯರು ತಳಮಟ್ಟದಲ್ಲಿ ಒಂದಾಗಿ ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡುತ್ತಿದ್ದಾರೆ. ಇದು ನಮ್ಮ ಗೆಲುವಿಒಗೆ ಪೂರಕವಾಗಲಿದೆ ಎಂದು ತಿಳಿಸಿದರು.

ಸ್ವಾಮಿಗಳಿಗೆ ಗೌರವ ನೀಡದ ಸಿಎಂ

ಸ್ವಾಮೀಜಿಗಳು ನನ್ನ ಸೇವೆ ಮಾಡಬೇಕು. ನನ್ನ ರಾಯಭಾರಿಗಳಾಗಿ ಕೆಲಸ ಮಾಡಬೇಕೆಂದು ಸಿಎಂದ ಅಟ್ಟಹಾಸ ತೋರಿಸಿದ್ದಾರೆ. ಸೇವೆ ಮಾಡುವಂತೆ ಸ್ವಾಮೀಜಿಗಳಿಗೆ ಕರೆ ಕೊಡುವ ಮಟ್ಟಕ್ಕೆ ಹೋಗಿದ್ದು ಎಷ್ಟರಮಟ್ಟಿಗೆ ಸರಿ ಎಂದು ಸುರೇಶ್ ಕುಮಾರ್ ಪ್ರಶ್ನಿಸಿದರು. ಜೆಡಿಎಸ್ ಕಾರ್ಯಾಧ್ಯಕ್ಷ ಕೃಷ್ಣಾ ರೆಡ್ಡಿ, ಮಾಜಿ ಎಂಎಲ್ಸಿ ಶ್ರೀಕಂಠೇಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net