ಅಪಘಾತಕ್ಕೆ ಇಬ್ಬರು ವಿದ್ಯಾರ್ಥಿನಿಯರು ಬಲಿ

ಅಪಘಾತಕ್ಕೆ ಇಬ್ಬರು ವಿದ್ಯಾರ್ಥಿನಿಯರು ಬಲಿ
Published on: 

ಕುದೂರು ರಾ.ಹೆದ್ದಾರಿ 75ರ ಗುಡೇವಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು, ಕಾರಿನಲ್ಲಿದ್ದ 6 ವಿದ್ಯಾರ್ಥಿಗಳ ಪೈಕಿ ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನ ಸಪ್ತಗಿರಿ ಕಾಲೇಜಿನ ವಿದ್ಯಾರ್ಥಿನಿ ವೈಷ್ಣವಿ, (19), ಜಾಹ್ನವಿ (19) ಮೃತರು.

ಗಗನ್, ಜಶ್ವಂತ್, ಹರ್ಣಿನಿ, ಹರ್ಣಿಶಿ ಗಾಯಗೊಂಡವರು.

ಬೆಂಗಳೂರು ಸಪ್ತಗಿರಿ ಕಾಲೇಜಿನ ದ್ವಿತೀಯ ಇಂಜಿನಿಯರಿಂಗ್ ವ್ಯಾಸಂಗ ವಾಡುತ್ತಿದ್ದ 6 ವಿದ್ಯಾರ್ಥಿಗಳು ಮಂಗಳವಾರ ಬೆಳಗ್ಗೆ 6.45ರ ಸುಮಾರಿನಲ್ಲಿ ಕಾಲೇಜಿನಿಂದ ಪ್ರಾಜೆಕ್ಟ್ ವರ್ಕ್‌ಗಾಗಿ ಬೆಂಗಳೂರಿನಿಂದ ಕುಣಿಗಲ್‌ನ ಉತ್ತರಿ ಬೆಟ್ಟಕ್ಕೆ ತೆರಳುತ್ತಿದ್ದರು. ವಾರ್ಗಮಧ್ಯದ ರಾ.ಹೆದ್ದಾರಿ 75ರ ಗುಡೇವಾರನಹಳ್ಳಿ ಬಳಿ ಕಾರಿನ ಟಯರ್ ಸ್ಫೋಟಗೊಂಡು ನಂತರ ಕಾರು ಮರಕ್ಕೆ ಡಿಕ್ಕಿಯಾಗಿದೆ. ಗಂಭೀರಗೊಂಡ ಹರ್ಣಿನಿ, ಹರ್ಣಿಶಿ, ಗಗನ್, ಜಶ್ವಂತ್‌ಗೆ ನೆಲಮಂಗಲದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುದೂರು ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿದರು.

ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಟುಂಬಸ್ಥರ ಆಕ್ರಂದನ ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿನಿಯರ ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಮೃತಪಟ್ಟ ಇಬ್ಬರು ವಿದ್ಯಾರ್ಥಿಗಳ ಶವವನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆ ಶವಗಾರದ ಬಳಿ ತರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.