ರಾಜ್ಯಕ್ಕೆ ಪರಿಹಾರ ಘೋಷಿಸಲು ಪಟ್ಟು

ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಹಾಗೂ ಮಾಹಿತಿ ಹಕ್ಕು ವಿಭಾಗದ ಕಾರ್ಯಕರ್ತರು ಶುಕ್ರವಾರ ರಾಜ್ಯಪಾಲ ಥಾವರಚಂದ್​ ಗೆಹಲೋತ್​ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಹಾಗೂ ಮಾಹಿತಿ ಹಕ್ಕು ವಿಭಾಗದ ಕಾರ್ಯಕರ್ತರು ಶುಕ್ರವಾರ ರಾಜ್ಯಪಾಲ ಥಾವರಚಂದ್​ ಗೆಹಲೋತ್​ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
Published on
ಬೆಂಗಳೂರು: ಮಳೆ ಅಭಾವದಿಂದ ಬರ ಎದುರಾಗಿದ್ದು, ರಾಜ್ಯವನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ, ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಹಾಗೂ ಮಾಹಿತಿ ಹಕ್ಕು ವಿಭಾಗದ ಕಾರ್ಯಕರ್ತರ ನಿಯೋಗ ಶುಕ್ರವಾರ ರಾಜ್ಯಪಾಲ ಥಾವರಚಂದ್​ ಗೆಹಲೋತ್​ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ನಂತರ ಮಾತನಾಡಿದ ಕೆಪಿಸಿಸಿ ಕಾನೂನು ವಿಭಾಗದ ಅಧ್ಯಕ್ಷ ಸಿ.ಎಂ. ಧನಂಜಯ, ರಾಜ್ಯದ 25 ಜಿಲ್ಲೆಗಳಲ್ಲಿ ಮಳೆಯ ಅಭಾವದಿಂದ ಬಿತ್ತನೆ ಕುಂಠಿತಗೊಂಡಿದೆ. ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುತ್ತಿದೆ. ಈಗಾಗಲೇ ಬಿತ್ತನೆಯಾಗಿರುವ ಪ್ರದೇಶಗಳಲ್ಲಿ ಮಳೆ ಕೊರತೆಯಿಂದ ಬೆಳೆ ಒಣಗಿದೆ. ಇದರಿಂದ ಬರ ಪರಿಸ್ಥಿತಿ ಎದುರಾಗಿದ್ದು, ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಬೇಕು ಎಂದು ಮನವಿ ಮಾಡಿದರು.
ಬರ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಎನ್​ಡಿಆರ್​ಎ್​ ನಿಧಿಯಿಂದ ಪರಿಹಾರ ಬಿಡುಗಡೆ ಮಾಡಬೇಕು. ಕೇಂದ್ರಕ್ಕೆ ಜಿಎಸ್ಟಿ ತೆರಿಗೆ ಪಾವತಿ ಮಾಡುವುದರಲ್ಲಿ ಕರ್ನಾಟಕ ಮುಂದಿದೆ. ಆದರೆ ರಾಜ್ಯಕ್ಕೆ ಪರಿಹಾರ ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡಿಕೊಂಡು ಬರುತ್ತಿದೆ. ಈ ಅನ್ಯಾಯವನ್ನು ಇಲ್ಲಿಗೆ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ಸಚಿವರು ಜಿಲ್ಲಾವಾರು ಪ್ರವಾಸ ಕೈಗೊಂಡು ಬರ ಪರಿಸ್ಥಿತಿ ಪರಿಶೀಲಿಸಿ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಿದ್ದಾರೆ. ಕೂಡಲೇ ರಾಜ್ಯಕ್ಕೆ ತಂಡವನ್ನು ಕಳುಹಿಸಿ ಪರಿಸ್ಥಿತಿಯ ಬಗ್ಗೆ ಅರಿತು ಪರಿಹಾರ ಘೋಷಿಸಬೇಕು. ಸಂಕಷ್ಟಕ್ಕೆ ಸ್ಪಂದಿಸದಿದ್ದರೆ ನ್ಯಾಯಾಲಯದ ಮೋರೆ ಹೋಗಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ವಿಭಾಗದ ಕಾರ್ಯಾಧ್ಯಕ್ಷರಾದ ಅನಂತ ನಾಯಕ್​, ಪ್ರವಿಣ್​ ಗೌಡ, ರಾಜ್ಯ ಪಬ್ಲಿಕ್​ ಪ್ರಾಸಿಕ್ಯೂಟರ್​ ಮಾಜಿ ಅಧ್ಯಕ್ಷ ಚಂದ್ರಮೌಳಿ, ಮುಖಂಡರಾದ ದಿವಾಕರ್​, ಗಿರೀಶ್​ ಕುಮಾರ್​, ಗೀತಾ ತಾವಂಶಿ, ಮಹೇಶ್​, ಗಿರೀಶ್​ ಪಟೇಲ್​, ಜಗದೀಶ್​ ಮತಿತ್ತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net