ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಒಟ್ಟು 1,934 ಪೌರಕಾರ್ಮಿಕರನ್ನು ತಪಾಸಣೆಗೆ ಒಳಪಡಿಸಿದ್ದು, ಈ ಪೈಕಿ 605 ಪುರುಷರು ಹಾಗೂ 1,348 ಮಹಿಳೆಯರು ಸೇರಿದ್ದಾರೆ. ತಪಾಸಣೆಗೆ 56 ವೈದ್ಯಾಧಿಕಾರಿಗಳು ಮತ್ತು 168 ಅರೆ ವೈದ್ಯಕೀಯ ಸಿಬ್ಬಂದಿಯನ್ನು ಬಳಸಿಕೊಳ್ಳಲಾಯಿತು ಎಂದು ದಕ್ಷಿಣ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ತಿಳಿಸಿದ್ದಾರೆ.