ಮಳೆಗಾಲದ ವೇಳೆ ರಾಜಕಾಲುವೆಗಳನ್ನು ಸ್ವಚ್ಛಗೊಳಿಸುವ ಎಎಂಸಿ ತಂಡ, ವಿಪತ್ತು ನಿರ್ವಹಣೆ ತಂಡ, ಮರ ಕಟಾವು ತಂಡ, ಸಿಲ್ಟ್ ಆ್ಯಂಡ್ ಟ್ರ್ಯಾಕ್ಟರ್ ತಂಡ, ಪ್ರಹಾರಿ ವಾಹನಗಳು, ಯಂತ್ರೋಪಕರಣ, ಗ್ಯಾಂಗ್‌ಮನ್‌ಗಳು ಸೇರಿ ಮುನ್ನೆಚ್ಚರಿಕಾ ಕಾರ್ಯಗಳಿಗೆ ಬಳಸುವ ಸಂಪನ್ಮೂಲಗಳ ಪ್ರದರ್ಶನ ಮತ್ತು ಸನ್ನದ್ಧತಾ ಪರಿಶೀಲನೆ ನಡೆಸಲಾಯಿತು. ಈ ವೇಳೆ ಮಳೆಗಾಲದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳೊಂದಿಗೆ ಸಂವಹನ ನಡೆಸಿ ಯಂತ್ರೋಪಕರಣಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು.