ಕೇಂದ್ರ ಪಾಲಿಕೆ ವ್ಯಾಪ್ತಿಯ ವಿಂಡ್‌ಟನಲ್ ಜಂಕ್ಷನ್‌ಗೆ ಬುಧವಾರ ಭೇಟಿ ನೀಡಿ ಸ್ಥಳಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಬೇಕು. ಕೆಳಸೇತುವೆ ಕಾಮಗಾರಿಗೆ ಸಂಬಂಧಿಸಿ ಜಲಮಂಡಳಿಯ ಪೈಪ್‌ಲೈನ್, ಒಳಚರಂಡಿ, ಬೆಸ್ಕಾಂ ಕೇಬಲ್, ಓಎಫ್‌ಸಿ ಕೇಬಲ್ ಸೇರಿ ಇತರ ಯುಟಿಲಿಟಿ ಸ್ಥಳಾಂತರ ಕಾರ್ಯ ಪ್ರಗತಿಯಲ್ಲಿದೆ. 10 ದಿನಗಳೊಳಗೆ ಸ್ಥಳಾಂತರ ಕಾರ್ಯ ಪೂರ್ಣಗೊಳಿಸಿ ತಡೆಗೋಡೆ ಕೆಲಸವನ್ನು ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.