ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ವಿಮೆ

ಅರಣ್ಯ ಅಧಿಕಾರಿ,
ಅರಣ್ಯ ಅಧಿಕಾರಿ,
Published on
ವನ ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ಮುಂಚೂಣಿ ಸಿಬ್ಬಂದಿ/ಹಸಿರು ಸೈನಿಕರು ಅಪಾಯ ಎದುರಿಸುತ್ತಾ ಹಗಲಿರುಳು ಶ್ರಮಿಸುತ್ತಿದ್ದು, ಇವರೆಲ್ಲರಿಗೂ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಒದಗಿಸಲು ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕಾಯಂ ಉದ್ಯೋಗಿಗಳಿಗೆ, ಅವರ ವೇತನ ಮತ್ತು ಶ್ರೇಣಿಯ ಹೊರತಾಗಿ 1 ಕೋಟಿ ರೂ. ಗಳ ವಿಮೆಯನ್ನು ಬ್ಯಾಂಕ್ ನೀಡುತ್ತದೆ. ಕರ್ತವ್ಯದಲ್ಲಿದ್ದಾಗ ಮೃತಪಟ್ಟರೆ ಹೆಚ್ಚುವರಿಯಾಗಿ 25 ಲಕ್ಷ ರೂ. ಗಳನ್ನು ಬ್ಯಾಂಕ್ ಪಾವತಿಸಲಿದೆ.
ಬ್ಯಾಂಕ್ ಆಫ್ ಬರೋಡಾದಲ್ಲಿ ನೌಕರರು ಪಿಂಚಣಿ ಖಾತೆ ಮುಂದುವರಿಸಿದರೆ, ವಿಮಾ ರಕ್ಷಣೆಯ ಸೌಲಭ್ಯ 70 ವರ್ಷ ವಯಸ್ಸಿನವರೆಗೆ ಸಿಗಲಿದೆ. ಇದಲ್ಲದೆ, ಕಾಯಂ ಉದ್ಯೋಗಿಗಳಿಗೆ 10 ಲಕ್ಷ ರೂ. ಜೀವ ವಿಮಾ ರಕ್ಷಣೆಯನ್ನೂ ಬ್ಯಾಂಕ್ ಒದಗಿಸುತ್ತದೆ ಎಂದು ಹೇಳಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net