ಒಬಿಸಿ ಅಭಿವೃದ್ಧಿಗೆ ನೂತನ ಯೋಜನೆ ರೂಪಿಸಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನ  ಸಭೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನ ಸಭೆ
Published on
ಬೆಂಗಳೂರು: ಗ್ರಾಮೀಣ ಭಾಗಗಳ ಹಿಂದುಳಿದ ಸಮುದಾಯಗಳಿಗೆ ವೃತ್ತಿ ಆಧಾರಿತ ನೂತನ ಯೋಜನೆಗಳನ್ನು ರೂಪಿಸುವಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೂಚನೆ ನೀಡಿದರು.
ವಿಧಾನಸೌಧದಲ್ಲಿ ಬುಧವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನ ನಡೆಸಿದ ಅವರು, ಸಾಂಪ್ರದಾಯಿಕ ವೃತ್ತಿಗಳನ್ನು ಇನ್ನೂ ಅವಲಂಬಿಸಿರುವ ಹಿಂದುಳಿದ ಸಮುದಾಯಗಳ ಸಮಗ್ರ ದತ್ತಾಂಶ ಸಂಗ್ರಹಿಸಿ, ಅವರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕೆ ವೈಜ್ಞಾನಿಕ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಂತೆ ಸೂಚಿಸಿದರು.
ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನ, ಫಲಾನುಭವಿಗಳ ವ್ಯಾಪ್ತಿ, ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮುಂದಿನ ಕಾರ್ಯತಂತ್ರದ ಕುರಿತು ಸಮಗ್ರ ಪರಿಶೀಲನೆ ನಡೆಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಅನೇಕ ಹಿಂದುಳಿದ ಸಮುದಾಯಗಳು ತಮ್ಮ ಸಾಂಪ್ರದಾಯಿಕ ವೃತ್ತಿಗಳನ್ನೇ ಜೀವನೋಪಾಯವಾಗಿ
ಅವಲಂಬಿಸಿಕೊಂಡಿದ್ದಾರೆ. ಬದಲಾಗುತ್ತಿರುವ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಅವರಿಗೆ ಹೊಸ ಕೌಶಲ, ಆಧುನಿಕ ತಂತ್ರಜ್ಞಾನ, ಮಾರುಕಟ್ಟೆ ಸಂಪರ್ಕ ಮತ್ತು ಹಣಕಾಸಿನ ಬೆಂಬಲ ಕಲ್ಪಿಸುವ ದಿಸೆಯಲ್ಲಿ ವಿಶೇಷ ಯೋಜನೆಗಳನ್ನು ರೂಪಿಸಬೇಕಾಗಿದೆ. ಇದಕ್ಕಾಗಿ ಸಮುದಾಯವಾರು ಸಮಗ್ರ ದತ್ತಾಂಶ ಸಂಗ್ರಹಿಸಿ, ಅಗತ್ಯಾಧಾರಿತ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net