ನಾಲ್ಕು ದಿನಗಳ ಮೇಳದಲ್ಲಿ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ಹಲವು ಉಪಯುಕ್ತ ಮಾಹಿತಿ ಮತ್ತು ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗಿದೆ. ಬೃಹತ್ ವಸ್ತುಪ್ರದರ್ಶನ ಮತ್ತು ಬೆಳೆ ಪ್ರಾತ್ಯಕ್ಷಿಕೆಗಳು, ಕೃಷಿ ತಂತ್ರಜ್ಞಾನ ಹಾಗೂ ವಿವಿಧ ತಳಿಗಳ ನೇರ ವೀಕ್ಷಣೆ, ಚರ್ಚಾಗೋಷ್ಠಿ, ಕೃಷಿ ವಿಜ್ಞಾನಿಗಳಿಂದ ರೈತರ ಸಮಸ್ಯೆಗಳಿಗೆ ನೇರ ಪರಿಹಾರ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ.ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಕೃಷಿ ಪ್ರವಾಸೋದ್ಯಮ ಹಾಗೂ ಗ್ರಾಮೀಣ ಕಲೆ ಮತ್ತು ಸಂಸ್ಕೃತಿಯ ಅನಾವರಣ ಪ್ರಮುಖವಾಗಿವೆ. ಪ್ರಗತಿಪರ ಕೃಷಿಕರಿಗೆ ಪ್ರಶಸ್ತಿ ಪ್ರದಾನ ಕೂಡ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.