ರಾಜ್ಯ ಚುನಾವಣಾ ಆಯೋಗವು ಮೇ 4ರಂದು ಹೊರಡಿಸಿರುವ ಆದೇಶದಲ್ಲಿ, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಂಬಂಧಿಸಿದ ಮಸ್ಟರಿಂಗ್ ಹಾಗೂ ಡಿಮಸ್ಟರಿಂಗ್ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸಂಬಂಧಿತ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಮತದಾನ ಸಾಮಗ್ರಿಗಳ ವಿತರಣೆ, ಸಿಬ್ಬಂದಿ ನಿಯೋಜನೆ, ಭದ್ರತಾ ವ್ಯವಸ್ಥೆ ಮತ್ತು ವಾಹನ ವ್ಯವಸ್ಥೆಯನ್ನು ಪೂರ್ವಭಾವಿಯಾಗಿ ಸಿದ್ಧಪಡಿಸುವಂತೆ ತಿಳಿಸಲಾಗಿದೆ.