ಜು.10ರೊಳಗೆ ಚುನಾವಣಾ ದಿನಾಂಕ ಘೋಷಣೆಯ ನಿರೀೆ ಇದ್ದು, ವೇಳಾಪಟ್ಟಿ ಪ್ರಕಟವಾದ ಕೂಡಲೇ ಜಿಬಿಎ ವ್ಯಾಪ್ತಿಯಲ್ಲಿ ಮಾದರಿ ನೀತಿಸಂಹಿತೆ ಜಾರಿಯಾಗಲಿದೆ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಾಗೂ ಸಿಬ್ಬಂದಿ ಕೊರತೆಯನ್ನು ಪರಿಗಣಿಸಿ, ಚುನಾವಣೆ ನಡೆಸಲು ನೀಡಿದ್ದ ಜೂನ್ 30ರ ಗಡುವನ್ನು ಸುಪ್ರೀಂ ಕೋರ್ಟ್ ಆಗಸ್ಟ್ 31ರವರೆಗೆ ವಿಸ್ತರಿಸಿದೆ. ಆದರೆ ಇದೇ ಕೊನೆಯ ಅವಕಾಶ ಎಂದು ಸ್ಪಷ್ಟಪಡಿಸಿರುವ ನ್ಯಾಯಪೀಠ, ಮತ್ತೊಮ್ಮೆ ಯಾವುದೇ ಕಾರಣಕ್ಕೂ ಕಾಲಾವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.