ಸೆ.14 ರಿಂದ 16ರ ವರೆಗೆ ಮೂರು ದಿನಗಳ ಕಾಲ ನಿರಂತರವಾಗಿ ಸ್ವಚ್ಛತಾ ಕಾರ್ಯ ನಡೆಸಲಾಗಿದ್ದು, ಕೆ.ಆರ್.ಮಾರುಕಟ್ಟೆ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹವಾಗುವ ಹೂವು, ಹಣ್ಣು, ಪೂಜಾ ಸಾಮಗ್ರಿಗಳು, ತರಕಾರಿ ತ್ಯಾಜ್ಯ ಹಾಗೂ ಇತರೆ ಹಬ್ಬದ ತ್ಯಾಜ್ಯವನ್ನು ತ್ವರಿತವಾಗಿ ತೆರವುಗೊಳಿಸಲು ವಿಶೇಷ ತಂಡಗಳು ಹಾಗೂ ಯಂತ್ರೋಪಕರಣಗಳನ್ನು ಬಳಸಲಾಯಿತು.