ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳಕ್ಕೆ ಸಿದ್ಧತೆ
ಬೆಂಗಳೂರು: ಕರ್ನಾಟಕದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಅತ್ಯುನ್ನತ ಮಟ್ಟದ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ಜಾಗತಿಕಮಟ್ಟದಲ್ಲಿ ಬೇಡಿಕೆ ಹೆಚ್ಚಿದೆ ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ 2026ರ ೆಬ್ರವರಿಯಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಜತೆಗೆ ಯೂರೋಪ್ ಖಂಡದ ಪ್ರವಾಸ ಕೈಗೊಂಡಿದ್ದಾರೆ.
ವಿವಿಧ ನಗರಗಳಿಗೆ ಭೇಟಿ, ರೋಡ್ ಶೋಗಳಲ್ಲಿ ಭಾಗಿಯಾಗುತ್ತಿದ್ದಾರೆ. ಬ್ರಾಟಿಸ್ಲಾವಾ ಸಮೀಪದ ತ್ರ್ಯಾವಾ ಘಟಕದಲ್ಲಿ ಕರ್ನಾಟಕದ 100 ಜನರು ಅಸೆಂಬ್ಲಿ-ಲೈನ್ ಆಪರೇಟರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ.
ಬ್ರಾಸಿಸ್ಲಾವಾದಲ್ಲಿರುವ ಸಿಟ್ರೊಯೆನ್ ಇ3, ಇ3 ಏರ್‌ಕ್ರಾಸ್ ಮತ್ತು ಒಪೆಲ್ ಫ್ರಾಂಟೆರಾ ಮಾದರಿಗಳ ವಾಹನ ತಯಾರಕ ಸ್ಟೆಲ್ಲಾಂಟಿಸ್ ಸಂಸ್ಥೆಯು ಆಟೋಮೊಬೈಲ್ ವಿದ್ಯುತ್ ಕೌಶಲ ತರಬೇತಾದವರಿಗೆ ಕೋರಿಕೆ ಸಲ್ಲಿಸಿದೆ ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ ತಿಳಿಸಿದ್ದಾರೆ.
ಸಚಿವರಿಬ್ಬರ ಪರಿಶೀಲನೆ
ಕರ್ನಾಟಕದ ಉದ್ಯೋಗಿಗಳಿರುವ ಸ್ಟೆಲ್ಲಾಂಟಿಸ್‌ಗೆ ಸಚಿವರಿಬ್ಬರು ಭೇಟಿ ನೀಡಿ, ಒದಗಿಸುತ್ತಿರುವ ಸೌಲಭ್ಯಗಳು, ಇತರ ವ್ಯವಸ್ಥೆಯನ್ನು ಪರಿಶೀಲಿಸಿದರು.
ತ್ರ್ವಾನಾ ಸ್ಥಾವರದಲ್ಲಿ ಪ್ರತಿದಿನ 4,000 ಕ್ಕೂ ಹೆಚ್ಚು ಕಾರ್ಮಿಕರು 1,300 ವಾಹನಗಳನ್ನು ತಯಾರು ಮಾಡುತ್ತಿರುವ ಮಾಹಿತಿ ಪಡೆದುಕೊಂಡರು.
ಇದೇ ವೇಳೆ ಸ್ಲೋವಾಕಿಯಾದಲ್ಲಿ ಉದ್ಯೋಗ ಪಡೆದಿರುವ ಕಲಬುರಗಿ ಜಿಲ್ಲೆಯ ಸೇಡಂನ ಸುನಿಲ್ ಕುಮಾರ್, ಧಾರವಾಡ ಜಿಲ್ಲೆಯ ಕಲಘಟಗಿಯ ರೋಹನ್ ಲಗಾಲಿ ಧನ್ಯವಾದ ಸಲ್ಲಿಸಿದರು.
ನಮ್ಮ ಹುಡುಗರು ನಮ್ಮ ಹೆಮ್ಮೆ
ನಂತರ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಮಾತನಾಡಿ ನಮ್ಮ ಯುವ ಸಮೂಹಕ್ಕೆ ಕೌಶಲ ಜತೆಗೆ ಇಂಗ್ಲಿಷ್, ಜರ್ಮನ್ ಮತ್ತು ಇಟಾಲಿಯನ್ ಭಾಷೆಗಳ ತರಬೇತಿ ನೀಡುತ್ತಿದ್ದು, ಜಾಗತಿಕಮಟ್ಟದಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿರುವುದು ಹೆಮ್ಮೆಯ ವಿಷಯವೆಂದರು.
ಸ್ಟೆಲ್ಲಾಂಟಿಸ್ ನೇಮಕಾತಿ ಮುಖ್ಯಸ್ಥರಾದ ಕತ್ರಿನಾ ಫೆಲ್ಕೋವಾ ಅವರು, ವೀಸಾ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸ್ಲೋವಾಕಿಯಾದಲ್ಲಿ ಭಾರತೀಯ ರಾಯಭಾರಿ ಅಪೂರ್ವ ಶ್ರೀವಾಸ್ತವಗೆ ಒತ್ತಾಯಿಸಿದರು.