

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವಸಂತಪುರ ವಾರ್ಡ್‌ನ ಕೋಣನಕುಂಟೆ ಗ್ರಾಮಕ್ಕೆ ಸೇರಿದ 1 ಎಕರೆ 37 ಗುಂಟೆ ವಿಸ್ತೀರ್ಣದ ಸರ್ಕಾರಿ ಸ್ವತ್ತಿಗೆ ದಕ್ಷಿಣ ಪಾಲಿಕೆ ಕಂದಾಯ ಅಧಿಕಾರಿಗಳು ಕಾನೂನುಬಾಹಿರವಾಗಿ ಖಾತಾ ಮಾಡಿಕೊಟ್ಟಿದ್ದಾರೆ. ಇದರಿಂದ 100 ಕೋಟಿ ರೂ. ಮೌಲ್ಯದ ಸ್ವತ್ತು ಅನ್ಯರ ಪಾಲಾಗಲಿದ್ದು, ಈ ಕೃತ್ಯ ಎಸೆಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆಗ್ರಹಿಸಿದ್ದಾರೆ.