ಕೈಗಾರಿಕಾ ಸಚಿವರಿಂದ ಎರಡು ಕೋಟಿ ರೂ. ಲಾಭಾಂಶ ಹಸ್ತಾಂತರ

ಕೈಗಾರಿಕಾ ಸಚಿವರಿಂದ ಎರಡು ಕೋಟಿ ರೂ. ಲಾಭಾಂಶ ಹಸ್ತಾಂತರ
ಕೈಗಾರಿಕಾ ಸಚಿವರಿಂದ ಎರಡು ಕೋಟಿ ರೂ. ಲಾಭಾಂಶ ಹಸ್ತಾಂತರ
Published on

ಪ್ರಮುಖ ಮುಖ್ಯಾಂಶಗಳು

  • ಕೆಐಎಡಿಬಿ ಹೊಸ ಬಹುಮಹಡಿ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ
  • ಮುಖ್ಯಮಂತ್ರಿ ಪರಿಹಾರ ನಿಧಿಗೆ ಮಂಡಳಿಯ ಲಾಭಾಂಶ ಸಲ್ಲಿಕೆ
  • ಬೆಂಗಳೂರಿನಲ್ಲಿ ತಲೆ ಎತ್ತಿದ ಕೆಐಎಡಿಬಿ ಸುಸಜ್ಜಿತ ಐದು ಬಹುಮಹಡಿ ಕಚೇರಿ ಕಟ್ಟಡ

ಬೆಂಗಳೂರು: ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ( KIADB new building) ಉದ್ಘಾಟಿಸಿದರು.

ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ ರೂ 32 ಕೋಟಿ ವೆಚ್ಚದಲ್ಲಿ ಈ ಬಹುಮಹಡಿ ಕಟ್ಟಡವನ್ನು ನಿರ್ಮಿಸಲಾಗಿದೆ. ಒಟ್ಟು 2,618 ಚದರ ಮೀಟರ್ ಅಳತೆಯ ನಿವೇಶನದಲ್ಲಿ ತಲೆಯೆತ್ತಿದೆ.

ಈ ಕಟ್ಟಡವು ಎರಡು ನೆಲ ಅಂತಸ್ತುಗಳು, ನೆಲ ಅಂತಸ್ತು, ಐದು ಮಹಡಿಗಳು ಹಾಗೂ ತಾರಸಿ ಮಹಡಿಯನ್ನು ಒಳಗೊಂಡಿದೆ. ಲೋಯರ್ ಬೇಸ್ ಮೆಂಟ್ ನಲ್ಲಿ 58 ಕಾರುಗಳು ಹಾಗೂ ಅಪ್ಪರ್ ಬೇಸ್ ಮೆಂಟ್ ನಲ್ಲಿ 38 ಕಾರುಗಳ ನಿಲುಗಡೆಗೆ ಜಾಗ ಕಲ್ಪಿಸಲಾಗಿದೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೈಗಾರಿಕಾ ಇಲಾಖೆ ಹಾಗೂ ಮಂಡಳಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು

ಲಾಭಾಂಶದ ಚೆಕ್ ಹಸ್ತಾಂತರ

ಇದೇ ವೇಳೆ, ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ಹಸ್ತಾಂತರಿಸಿದರು.

ಹಿಂದೆ ಕೈಗಾರಿಕಾ ಸಚಿವರಾಗಿದ್ದಾಗ ಈ ಕಟ್ಟಡ ಕಟ್ಟಲು ಶಾಸಕ ಆರ್.ವಿ.ದೇಶಪಾಂಡೆ ಅವರು ತೀರ್ಮಾನ ತೆಗೆದುಕೊಂಡಿದ್ದರು. ಈ ಸಂದರ್ಭದಲ್ಲಿ ಅವರನ್ನೂ ಸನ್ಮಾನಿಸಲಾಯಿತು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವ ಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ ಮತ್ತಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net