ಕಡಿಮೆ ಪ್ರಗತಿ ಪ್ರದೇಶಗಳತ್ತ ಹೆಚ್ಚಿನ ಗಮನಹರಿಸಲು ಸೂಚನೆ

low-progress
low-progress
Published on

ಪ್ರಮುಖ ಮುಖ್ಯಾಂಶಗಳು

  • ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ವಿ.ಅನ್ಬುಕುಮಾರ್ ನಿರ್ದೇಶನ
ಬೆಂಗಳೂರು: ಯಾವ ಮತಗಟ್ಟೆಗಳಲ್ಲಿ ಕಡಿಮೆ ಪ್ರಗತಿ ಆಗಿದೆಯೋ ಅಂತಹ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸಿ ಎಸ್‌ಐಆರ್ ಪ್ರಗತಿಯನ್ನು ತ್ವರಿತಗೊಳಿಸುವಂತೆ ವಿ.ಅನ್ಬುಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್‌ಐಆರ್ ಸಭೆ ನಡೆಸಿ ಈವರೆಗಿನ ಪ್ರಗತಿ ಪರಿಶೀಲನೆ ನಡೆಸಿದ ವೇಳೆ ಅವರು ಈ ನಿರ್ದೇಶನವನ್ನು ನೀಡಿದರು.
ಬಿಎಲ್ಒಗಳು ಎಸ್‌ಐಆರ್ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕತೆಯಿಂದ ನಿರ್ವಹಿಸಬೇಕು. ಮತದಾರರ ನೋಂದಣಾಧಿಕಾರಿಗಳು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭೇಟಿ ನೀಡಿ ಎಸ್‌ಐಆರ್ ಕಾರ್ಯವನ್ನು ಪರಿಶೀಲಿಸಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರಿಷ್ಕರಣೆ ಕಾರ್ಯವನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಖಡಕ್ ಸೂಚನೆ ನೀಡಿದರು.
ಸಭೆಯಲ್ಲಿ ನಗರ ಜಿಲ್ಲಾಧಿಕಾರಿ ಪಿ.ಎಸ್. ಕಾಂತರಾಜು, ಜಿಪಂ ಸಿಇಒ ಆರ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್ ಕೆ. ನಾಯಕ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net