ಬೀದಿ ದೀಪ,ಡಾಂಬರೀಕರಣ,ರಸ್ತೆ ಅಭಿವೃದ್ದಿಗೆ ಮನವಿ ಮಾಡಿದ ಕುಸುಮಾ/kusuma

ಗ್ರೇಟರ್ ಬೆಂಗಳೂರು ನಗರ ಪಾಲಿಕೆ ಸಚಿವ ಕೃಷ್ಣಭೈರೇಗೌಡ ಅವರನ್ನು ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ,ಕೆಪಿಸಿಸಿ ವಕ್ತಾರೆ ಎಚ್.ಕುಸುಮಾ ಭೇಟಿ ಮಾಡಿ  ಕಾಮಗಾರಿ ಪ್ರಾರಂಭಿಸುವ ಮನವಿ ಸಲ್ಲಿಸಿದರು.
ಗ್ರೇಟರ್ ಬೆಂಗಳೂರು ನಗರ ಪಾಲಿಕೆ ಸಚಿವ ಕೃಷ್ಣಭೈರೇಗೌಡ ಅವರನ್ನು ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ,ಕೆಪಿಸಿಸಿ ವಕ್ತಾರೆ ಎಚ್.ಕುಸುಮಾ ಭೇಟಿ ಮಾಡಿ ಕಾಮಗಾರಿ ಪ್ರಾರಂಭಿಸುವ ಮನವಿ ಸಲ್ಲಿಸಿದರು.
Published on
ಬೆಂಗಳೂರು:ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೀದಿ ದೀಪಗಳನ್ನು ಅಳವಡಿಸಲು ಟೆಂಡರ್ ಪ್ರಕ್ರಿಯೆ ಮುಗಿದಿದ್ದರೂ, ಬೀದಿ ದೀಪ ಅಳವಡಿಸಲು ಗುತ್ತಿಗೆದಾರರಿಗೆ ಅವಕಾಶ ನೀಡುತ್ತಿಲ್ಲ ಎಂದು ಕೆ.ಪಿ.ಸಿ.ಸಿ ವಕ್ತಾರೆ ಎಚ್ ಕುಸುಮಾ ಆರೋಪಿಸಿದ್ದಾರೆ.
ರಸ್ತೆ ಅಭಿವೃದ್ದಿ, ಡಾಂಬರೀಕರಣಕ್ಕಾಗಿ ರೂ 214 ಕೋಟಿ ಅನುದಾನ ಬಿಡುಗಡೆಯಾಗಿದ್ದರೂ, ಟೆಂಡರ್ ಕರೆಯಲು,ಬೀದಿ ದೀಪ ಅಳವಡಿಸಲು ಶಾಸಕ ಮುನಿರತ್ನ ಬಿಡುತ್ತಿಲ್ಲ , ಈ ಕೂಡಲೇ ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡಬೇಕೆಂದು ಕುಸುಮಾ ಹಾಗೂ ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ ಅವರು ಗ್ರೇಟರ್ ಬೆಂಗಳೂರು ಅಭಿವೃದ್ದಿ ಸಚಿವ ಕೃಷ್ಣ ಭೈರೇಗೌಡರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಆರ್.ಆರ್.ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಬಹುಕಾಲದಿಂದ ಬಾಕಿ ಉಳಿದಿರುವ ಕಾಮಗಾರಿಗಳಿಗೆ ಶೀಘ್ರವೇ ಪರಿಹಾರ ಕಲ್ಪಿಸಿ ಕ್ಷೇತ್ರದ ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಷೇತ್ರದ ಜನತೆಯ ಪರವಾಗಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವ ಕೃಷ್ಣಭೈರೇಗೌಡ ಭರವಸೆ ನೀಡಿ ಶೀಘ್ರದಲ್ಲಿಯೇ ಆರ್.ಆರ್.ನಗರ ಕ್ಷೇತ್ರಕ್ಕೆ ಭೇಟಿ ನೀಡಿ ಅಧಿಕಾರಿಗಳ ಸಭೆ ಕರೆದು ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net