ಸಸ್ಯಕಾಶಿ ಕೇವಲ ಉದ್ಯಾನವಲ್ಲ, ಇತಿಹಾಸವಾಗಿದೆ. ಗಂಗ ಸಾಮ್ರಾಜ್ಯದಲ್ಲಿ ಕೃಷಿಕರು, ರೈತರ ಇತಿಹಾಸವನ್ನು ಇಟ್ಟುಕೊಂಡು ಈ ಫಲಪುಷ್ಪ ಪ್ರದರ್ಶನವನ್ನು ರೂಪಿಸಲಾಗಿದೆ. ಗಂಗರು ಆಗಿನ ಕಾಲದಲ್ಲಿ ಕಟ್ಟಿದ್ದ ಕೆರೆಗಳು ಇಂದಿಗೂ ಉಳಿದಿವೆ. ಕಷ್ಟಕಾಲದಲ್ಲಿ ಆ ಕೆರೆಗಳು ರಕ್ಷಣೆ ಮಾಡಿವೆ. ಗಂಗರ ಇತಿಹಾಸ ಸಮಾನತೆ, ಕೃಷಿಕರ ಬದುಕು, ಹೋರಾಟವನ್ನು ಹೊಂದಿದೆ. ಇದು ನಮ್ಮ ಸಂಸತಿ, ರೈತರ ಬದುಕು ಹಾಗೂ ಕಲೆಯ ಸಂಭ್ರಮ. ಈ ವರ್ಷದ ಸ್ವಾತಂತ್ರ್ಯ ಸಂಭ್ರಮದಲ್ಲಿ ನಾಡಿನ ಜನತೆ ಈ ಫಲಪುಷ್ಪ ಪ್ರದರ್ಶನ ವೀಕ್ಷಿಸಿ ಆನಂದಿಸಬೇಕು. ಯುವಕರು, ಮಹಿಳೆಯರು, ಹಿರಿಯರು ಸೇರಿ ಎಲ್ಲರೂ ಈ ಪ್ರದರ್ಶನವನ್ನು ಕಣ್ತುಂಬಿಕೊಳ್ಳಬೇಕು ಎಂದು ಮನವಿ ಮಾಡಿದರು.