ಮಿಟ್ಟಗಾನಹಳ್ಳಿ, ಕಣ್ಣೂರು ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಘನತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ಘನತ್ಯಾಜ್ಯ ವಿಲೇವಾರಿಯ ಪರಿಣಾಮ ಈ ಪ್ರದೇಶಗಳಲ್ಲಿ ಅಂದಾಜು 2,878 ದಶಲಕ್ಷ ಲೀಟರ್ ಲಿಚೆಟ್ ಶೇಖರಣೆಯಾಗಿದೆ. ಆದ್ದರಿಂದ, ಮಿಟ್ಟಗಾನಹಳ್ಳಿ, ಕಣ್ಣೂರುನಲ್ಲಿ ಲಿಚೆಟ್ ಸಂಸ್ಕರಣಾ ಘಟಕ ನಿರ್ಮಿಸಲು, ಲೀಚೆಟ್ ತ್ಯಾಜ್ಯ ಸಂಸ್ಕರಿಸಲು ಬಿಎಸ್‌ಡಬ್ಲ್ಯುಎಂಎಲ್‌ನಿಂದ ಮುಕ್ಕ ಪ್ರೋಟಿನ್ಸ್ ಕಾರ್ಯಾದೇಶ ಪತ್ರ ಪಡೆದಿದೆ.